ಹೈದರಾಬಾದ್,ಅ. 03(DaijiworldNews/AK): ನಾಗಚೈತನ್ಯ ಮತ್ತು ನಟಿ ಸಮಂತಾ ರುತ್ ಪ್ರಭು ವಿಚ್ಛೇದನಕ್ಕೆ ಬಿಆರ್ಎಸ್ ಕಾರ್ಯಾಧ್ಯಕ್ಷ ಕೆಟಿ ರಾಮರಾವ್ ಕಾರಣ ಎಂದು ಹೇಳಿ ವಿವಾದಕ್ಕೆ ಸಿಲುಕಿದ್ದ ತೆಲಂಗಾಣ ಅರಣ್ಯ ಸಚಿವೆ ಕೊಂಡಾ ಸುರೇಖಾ ವಿರುದ್ಧ ತೆಲುಗು ಚಿತ್ರರಂಗದ ಸೂಪರ್ಸ್ಟಾರ್ ನಾಗಾರ್ಜುನ ಅಕ್ಕಿನೇನಿ ದೂರು ದಾಖಲಿಸಿದ್ದಾರೆ.
ತಮ್ಮ ಮಗ ಮತ್ತು ಸಮಂತಾ ದಾಂಪತ್ಯ ಜೀವನಕ್ಕೆ ಸಂಬಂಧಿಸಿದಂತೆ ಮಾನಹಾನಿಕರ ಹೇಳಿಕೆ ನೀಡಿದ್ದರೆಂದು ಆರೋಪಿಸಿ ಕಾಂಗ್ರೆಸ್ ನಾಯಕರಿಗೆ ದೂರು ಸಲ್ಲಿಸಿದ್ದಾರೆ. ಹೈದರಾಬಾದ್ನ ನಾಂಪಲ್ಲಿಯಲ್ಲಿ ದೂರು ದಾಖಲಿಸಿದ್ದಾರೆ. ಸುರೇಖಾ ಸುಳ್ಳು ಹೇಳಿಕೆ ನೀಡಿದ್ದಾರೆ. ಈ ಮೂಲಕ ವೈಯಕ್ತಿ, ವೃತ್ತಿಪರ, ಕೌಟುಂಬಿಕ ಪ್ರತಿಷ್ಠೆಗೆ ಹಾನಿ ಮಾಡಿದ್ದಾರೆ. ಉದ್ದೇಶಪೂರ್ವಕವಾಗಿ ಆರೋಪ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ತಮ್ಮ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿದ್ದಂತೆ ಹಿಂದೇಟು ಹಾಕಿದ ಸಚಿವೆ ಕೊಂಡಾ ಸುರೇಖಾ ಹೇಳಿಕೆ ಹಿಂಪಡೆದು ಕ್ಷಮೆ ಕೋರಿದ್ದಾರೆ. ನನಗೆ ಯಾರ ವಿರುದ್ಧವೂ ವೈಯಕ್ತಿಕ ದ್ವೇಷವಿಲ್ಲ. ಮಾತಿನ ಭರದಲ್ಲಿ ಬಾಯಿತಪ್ಪಿ ಆಡಿದ ಮಾತಿದು. ತೆಲುಗು ಚಿತ್ರರಂಗದ ಕುರಿತು ನಾನು ನೀಡಿದ ಹೇಳಿಕೆಯನ್ನು ಹಿಂಪಡೆಯುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.