ಹೈದರಾಬಾದ್,ಅ.15(DaijiworldNews/TA):ರಶ್ಮಿಕಾ ಮಂದಣ್ಣ ಸದ್ಯ ತೆಲುಗು, ತಮಿಳು ಮತ್ತು ಹಿಂದಿ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕೆಲವು ದಿನಗಳ ಹಿಂದೆ ರಶ್ಮಿಕಾ ಅವರ ಡೀಪ್ ಫೇಕ್ ವಿಡಿಯೋ ವೈರಲ್ ಆಗಿದ್ದು ಸಂಚಲನ ಮೂಡಿಸಿದ್ದು ಗೊತ್ತೇ ಇದೆ. ಈ ಪ್ರಕರಣದಲ್ಲಿ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ ಇತ್ತೀಚೆಗೆ ರಶ್ಮಿಕಾ ಮಂದಣ್ಣ ಅವರು ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ (I4C) ಬ್ರಾಂಡ್ ಅಂಬಾಸಿಡರ್ ಆಗಿ ನೇಮಕಗೊಂಡಿದ್ದಾರೆ.
ಇದೇ ವೇಳೆ ನಾನು ಕೇಂದ್ರ ಸರ್ಕಾರದ ಜೊತೆಗೆ ಗೃಹ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ ಬ್ರಾಂಡ್ ಅಂಬಾಸಿಡರ್ ಆಗಿದ್ದೇನೆ ಎಂದು ಹೇಳಲು ನನಗೆ ಸಂತೋಷವಾಗಿದೆ. ಎಂಬುವುದಾಗಿ ಹೇಳಿ ವೀಡಿಯೋ ಒಂದನ್ನು ಹಂಚಿಕೊಂಡಿರುವ ರಶ್ಮಿಕಾ ಅನೇಕ ವಿಚಾರಗಳನ್ನು ಹೇಳಿದ್ದಾರೆ.
ವಿಡಿಯೋದಲ್ಲಿ , ಕೆಲವು ವರ್ಷಗಳ ಹಿಂದೆ ನನ್ನ ಡೀಪ್ ಫೇಕ್ ವಿಡಿಯೋ ವೈರಲ್ ಆಗಿದ್ದು ಗೊತ್ತೇ ಇದೆ. ಅದು ಸೈಬರ್ ಕ್ರೈಮ್. ಅದರ ನಂತರ ನಾನು ಸೈಬರ್ ಅಪರಾಧಗಳ ವಿರುದ್ಧ ಹೋರಾಡಬೇಕು ಎಂದು ಯೋಚಿಸಿದೆ. ಈ ಬಗ್ಗೆ ಎಲ್ಲರಿಗೂ ಅರಿವು ಮೂಡಿಸಬೇಕು ಎಂದುಕೊಂಡಿದ್ದೇನೆ.
ನಾನು ಭಾರತ ಸರ್ಕಾರದ ಜೊತೆಗೆ ಗೃಹ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ ಬ್ರಾಂಡ್ ಅಂಬಾಸಿಡರ್ ಆಗಿದ್ದೇನೆ ಎಂದು ಹೇಳಲು ನನಗೆ ಸಂತೋಷವಾಗಿದೆ. ಸೈಬರ್ ಕ್ರಿಮಿನಲ್ಗಳು ಎಲ್ಲರನ್ನೂ ಟಾರ್ಗೆಟ್ ಮಾಡುತ್ತಿದ್ದಾರೆ.
ನಾವು ಎಚ್ಚರವಾಗಿರುವುದು ಮಾತ್ರವಲ್ಲದೆ ನಮ್ಮನ್ನು ನಾವು ರಕ್ಷಿಸಿಕೊಳ್ಳಬೇಕು ಮತ್ತು ಸೈಬರ್ ಅಪರಾಧಗಳ ವಿರುದ್ಧ ಕೆಲಸ ಮಾಡಬೇಕು. ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ ಬ್ರಾಂಡ್ ಅಂಬಾಸಿಡರ್ ಆಗಿ ನಾನು ಸೈಬರ್ ಅಪರಾಧಗಳ ಬಗ್ಗೆ ಜಾಗೃತಿ ಮೂಡಿಸುತ್ತೇನೆ. ಸೈಬರ್ ಅಪರಾಧಗಳಿಂದ ದೇಶವನ್ನು ರಕ್ಷಿಸಬೇಕು ಎಂದು ಅವರು ಹೇಳಿದ್ದಾರೆ.
ಈ ವೀಡಿಯೊ ವೈರಲ್ ಆದ ನಂತರ, ಅನೇಕ ಅಭಿಮಾನಿಗಳು ಮತ್ತು ನೆಟಿಜನ್ಗಳು ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ ಬ್ರಾಂಡ್ ಅಂಬಾಸಿಡರ್ ಆಗಿದ್ದಕ್ಕಾಗಿ ರಶ್ಮಿಕಾ ಅವರನ್ನು ಅಭಿನಂದಿಸಿದ್ದಾರೆ.