ನವದೆಹಲಿ, ಜ 8 (Daijiworld News/MB) : ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯ(ಜೆಎನ್ ಯು)ದಲ್ಲಿ ಭಾನುವಾರ ನಡೆದ ದಾಳಿ ಖಂಡಿಸಿ ಪ್ರತಿಭಟನೆಯಲ್ಲಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಭಾಗವಹಿಸಿ ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಿದ್ದಾರೆ.
ಮಂಗಳವಾರ ಜೆಎನ್ಯುಗೆ ಭೇಟಿ ನೀಡಿದ ದೀಪಿಕಾ ಪಡುಕೋಣೆ, ದುಷ್ಕರ್ಮಿಗಳಿಂದ ಹಲ್ಲೆಗೊಳಗಾದ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.
ಬಾಲಿವುಡ್ನ ಹಲವರು ಜೆಎನ್ಯುನಲ್ಲಿ ನಡೆದ ಹಿಂಸಾಚಾರ ಘಟನೆಯನ್ನು ಖಂಡನೆ ಮಾಡಿದ್ದು ಈಗ ದೀಪಿಕಾ ಅವರು ಪ್ರತಿಭಟನೆಯಲ್ಲಿ ಭಾಗಿಯಾಗುವ ಮೂಲಕ ಖಂಡನೆ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನಕಾರರು ಜೈಭೀಮ್, ಲಾಲ್ ಸಲಾಮ್ ಎಂಬ ಘೋಷಣೆಗಳನ್ನು ಕೂಗುತ್ತಿದ್ದರೂ ದೀಪಿಕಾ ಪಡುಕೋಣೆ ಯಾವುದೇ ಘೋಷಣೆಗಳನ್ನು ಕೂಗಿಲ್ಲ. ಮೌನವಾಗಿಯೇ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮಾಧ್ಯಮಕ್ಕೂ ಯಾವುದೇ ಹೇಳಿಕೆಗಳನ್ನು ನೀಡಿಲ್ಲ ಹಾಗೂ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿಲ್ಲ.
ಈ ಮೊದಲು ಪೌರತ್ವ ಕಾಯ್ದೆ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ದೀಪಿಕಾ, "ಸಾಮಾಜಿಕವಾಗಿ ಯಾರೂ ಭಯಗೊಂಡಿಲ್ಲ ಎನ್ನುವುದು ಹೆಮ್ಮೆಯ ವಿಷಯ ಎಂದು ಹೇಳಿದ್ದರು.