ಬೆಂಗಳೂರು, ಎ.06 (DaijiworldNews/MSP): ಕನ್ನಡ ಚಿತ್ರರಂಗದ ಹೆಸರಾಂತ ಕಾಮಿಡಿ ಕಲಾವಿದ , 300ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಬುಲೆಟ್ ಪ್ರಕಾಶ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಸದ್ಯ ಅವರಿಗೆ ಪೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬುಲೆಟ್ ಪ್ರಕಾಶ್ ಅವರಿಗೆ ಕಿಡ್ನಿ ವೈಫಲ್ಯ ಮತ್ತು ಸೋಂಕಿನಿಂದ ಬಳಲುತ್ತಿದ್ದು, ಅವರಿಗೆ ಡಯಾಲಿಸ್ ಮಾಡಲಾಗುತ್ತಿತ್ತು.
ಆದರೆ ಆರೋಗ್ಯ ತೀರಾ ಬಿಗಡಾಯಿಸಿದ ಹಿನ್ನೆಲೆಯಲ್ಲಿ ಸದ್ಯ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ಮೂಲಗಳಿಂದ ತಿಳಿದುಬಂದಿದೆ.