ಚೆನ್ನೈ, ಆ. 18 (DaijiworldNews/MB) : ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸುಧಾರಿಸಿದ್ದು ಈಗ ವೆಂಟಿಲೇಟರ್ ತೆಗೆದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಎಸ್ಪಿಬಿ ಸಹೋದರಿ ಎಸ್. ಪಿ. ಶೈಲಜಾ ಅವರು ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮವೊಂದಕ್ಕೆ ಮಾಹಿತಿ ನೀಡಿರುವ ಅವರು, ಆಗಸ್ಟ್ 5ರಂದು ಎಸ್ಪಿಬಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಅವರನ್ನು ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿದ್ದು ಆಗಸ್ಟ್ ೧೩ ರಂದು ಆರೋಗ್ಯ ಸ್ಥಿತಿ ಗಂಭೀರವಾದ ಕಾರಣ ಐಸಿಯುಗೆ ವರ್ಗಾಯಿಸಲಾಗಿತ್ತು. ಇದೀಗ ಮಂಗಳವಾರ ಎಸ್ಪಿಬಿ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದ್ದು ವೆಂಟಿಲೇಡರ್ ತೆಗೆದು ಚಿಕಿತ್ಸೆ ನೀಡಲಾಗುತ್ತಿದೆ. ಇದರಿಂದಾಗಿ ವೈದ್ಯರು ಸಂತಸಗೊಂಡಿದ್ದಾರೆ ಎಂದು ಹೇಳಿದ್ದಾರೆ.
ಇನ್ನು ಅವರ ಆರೋಗ್ಯ ಸುಧಾರಿಸಿದ ಕಾರಣ ವೆಂಟಿಲೇಟರ್ ತೆಗೆದಿದ್ದರೂ ಕೂಡಾ ಆರೋಗ್ಯದ ಮೇಲೆ ತೀವ್ರ ನಿಗಾ ಇರಿಸಲಾಗಿದೆ. ಮೂರ್ತ ವಿಸರ್ಜನೆಯಲ್ಲೂ ಯಾವುದೇ ತೊಂದರೆ ಉಂಟಾಗಿಲ್ಲ. ಪ್ರಪಂಚವೇ ಎಸ್ಪಿಬಿ ಚೇತರಿಕೆಗೆ ಪ್ರಾರ್ಥಿಸಿದ್ದು ಅದರ ಫಲ ದೊರೆತಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆ ಎಸ್ಪಿಬಿ ಅವರನ್ನು ಐಸಿಯುನಲ್ಲಿ ಇರಿಸಲಾಗಿತ್ತು. ಈ ಸಂದರ್ಭದಲ್ಲಿ ಹಲವು ಗಣ್ಯರು, ಅಭಿಮಾನಿಗಳು ಎಸ್ಪಿಬಿ ಚೇತರಿಕೆಗೆ ಪ್ರಾರ್ಥಿಸಿದ್ದರು.