ಚೆನ್ನೈ,ಆ 19 (DaijiworldNews/HR): ಕೊರೊನಾ ಸೋಂಕಿನಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ದಾಖಲಾಗಿರುವ ಖ್ಯಾತ ಗಾಯಕ ಎಸ್.ಪಿ ಬಾಲಸುಬ್ರಮಣ್ಯಂ ಅವರ ಅರೋಗ್ಯ ಮತ್ತಷ್ಟು ಗಂಭೀರವಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಎಂಜಿಎಂ ಆಸ್ಪತ್ರೆಯಲ್ಲಿ ಕಳೆದ 15 ದಿನಗಳಿಂದ ಚಿಕಿತ್ಸೆ ಪಡೆಯುತ್ತಿರುವ ಎಸ್ಪಿಬಿಯವರ ಆರೋಗ್ಯ ಚೇತರಿಕೆ ಕಾಣದ ಕಾರಣ 7 ದಿನಗಳ ಹಿಂದೆ ವೆಂಟಿಲೇಟರ್ ಅಳವಡಿಸಲಾಗಿತ್ತು. ಆದರೆ ಇದೀಗ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟಿದೆ.
ತೀವ್ರ ನಿಗಾ ಘಟಕದಲ್ಲಿರುವ ಎಸ್.ಪಿ ಬಾಲಸುಬ್ರಮಣ್ಯಂ ಅವರು ಹೃದಯ ಸಂಬಂಧಿ ಕಾಯಿಲೆಯಿಂದಲೂ ಬಳಲುತ್ತಿದ್ದು, ಲೈಫ್ ಸಪೋರ್ಟರ್ನಿಂದ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ.
ನಿನ್ನೆ ಸ್ಪಲ್ಪ ಚೇತರಿಕೆಕೊಂಡಿದ್ದ ಎಸ್ಪಿಬಿಯವರ ಆರೋಗ್ಯ ಸ್ಥಿತಿ ಇಂದು ಮತ್ತಷ್ಟು ಹದಗೆಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ.