ಚನ್ನೈ, ಆ. 24(DaijiworldNews/HR): ಸಂಗೀತ ದಿಗ್ಗಜ ಎಸ್ಪಿ ಬಾಲಸುಬ್ರಹ್ಮಣ್ಯಂ ಅವರು ಕೊರೊನಾ ಸೋಂಕನ್ನು ಜಯಿಸಿದ್ದು, ಕೋವಿಡ್ ಪರೀಕ್ಷೆಯಲ್ಲಿ ಅವರದ್ದು ನೆಗೆಟಿವ್ ಬಂದಿದ್ದು, ಇದೀಗ ಆರೋಗ್ಯ ಸ್ಥಿತಿ ಸುಧಾರಿಸಿದೆ ಎಂದು ಆಸ್ಪತ್ರೆ ಮೂಲಗಳಿಂದ ತಿಳಿದು ಬಂದಿದೆ.
ಎಸ್ಪಿಬಿ ಅವರ ಪುತ್ರ ಎಸ್ಪಿ ಚರಣ್ ಅವರು ಈ ಬಗ್ಗೆ ಧೃಡ ಪಡಿಸಿದ್ದು, ಚೆನ್ನೈನ ಎಂಜಿಎಂ ಹೆಲ್ತ್ಕೇರ್ ಆಸ್ಪತ್ರೆಯಲ್ಲಿನ ತೀವ್ರ ನಿಗಾ ಘಟಕದಲ್ಲಿ (ಐಸಿಯು) ತಂದೆಯ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿದ್ದಾರೆ.
ಎಸ್ಪಿಬಿ ಅವರ ಆರೋಗ್ಯ ಸುಧಾರಣೆಗಾಗಿ ಅನೇಕ ಅಭಿಮಾನಿಗಳು ದೇವರ ಮೊರೆ ಹೋಗಿದ್ದು, ಇದೀಗ ಕೊಂಚ ನಿರಾಳಾರಾಗಿದ್ದಾರೆ.
ಎಸ್ಪಿ ಬಾಲಸುಬ್ರಹ್ಮಣ್ಯಂ ಆಗಸ್ಟ್ 5 ರಂದು ಶೀತ ಮತ್ತು ಜ್ವರ ಕಾಣಿಸಿಕೊಂಡು ಉಸಿರಾಟ ತೊಂದರೆಯಾಗಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಕೋವಿಡ್ 19 ಲಕ್ಷಣಗಳಿರುವುದು ದೃಢಪಟ್ಟಿತ್ತು. ಇದೀಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎನ್ನಲಾಗಿದೆ.