ಬೆಂಗಳೂರು, ಸೆ. 04 (DaijiworldNews/SM): ಸ್ಯಾಂಡಲ್ ವುಡ್ ಡ್ರಗ್ ಪ್ರಕರಣ ಸಂಬಂಧಪಟ್ಟಂತೆ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿಯನ್ನು ನ್ಯಾಯಾಲಯ ಮೂರು ದಿನಗಳ ಸಿಸಿಬಿ ಕಸ್ಟಡಿಗೆ ನೀಡಿ ಆದೇಶ ನೀಡಿದೆ.
ಸಾಕಷ್ಟು ವಿವಾದ ಹುಟ್ಟಿಸಿದ್ದ ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸ್ಯಾಂಡಲ್ ವುಡ್ ನಟಿ ರಾಗಿಣಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದೆ. ಈ ನಡುವೆ ರಾಗಿಣಿಯನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರು ವಿಚಾರಣೆ ನಡೆಸಿ ರಾಗಿಣಿಯನ್ನು 3 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿ ಆದೇಶ ನೀಡಿದ್ದಾರೆ.
ಸದ್ಯ ರಾಗಿಣಿ ಅವರನ್ನು ಸಿಸಿಬಿ ಅಧಿಕಾರಿಗಳು ಮೆಡಿಕಲ್ ಪರೀಕ್ಷೆಗಾಗಿ ಬೋರಿಂಗ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಡ್ರಗ್ಸ್ ಸೇವನೆ ಹಾಗೂ ಪೆಡ್ಲರ್ ಗಳೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪದ ಮೇಲೆ ರಾಗಿಣಿಯನ್ನು ಸಿಸಿಬಿ ವಶಕ್ಕೆ ಪಡೆದಿದ್ದು, ವಿಚಾರಣೆ ತೀವ್ರಗೊಂಡಿದೆ.