ಮುಂಬೈ, ಸೆ.7(DaijiworldNews/HR): ಬಾಲಿವುಡ್ ನಟಿ ಮಲೈಕಾ ಅರೋರಾ ಅವರಿಗೆ ಇಂದು ಕೊರೊನಾ ಸೋಂಕು ದೃಢಪಟ್ಟಿದ್ದು, ತಮ್ಮ ಮನೆಯಲ್ಲೇ ಪ್ರತ್ಯೇಕ ವಾಸಕ್ಕೆ ಒಳಗಾಗಿದ್ದಾರೆ.
ಮಲೈಕಾ ಅರೋರಾ ಈ ಬಗ್ಗೆ ತಮ್ಮ ಇನ್ಸ್ಟಾಗ್ರಾಂ ಮೂಲಕ ಖಚಿತಪಡಿಸಿದ್ದಾರೆ.
ಇಂದು ನನಗೆ ಕೊರೊನಾ ಸೋಂಕು ದೃಢಪಟ್ಟಿದೆ. ಆದರೆ ಯಾವುದೇ ರೋಗ ಲಕ್ಷಣಗಳು ಕಾಣಿಸಿಕೊಂಡಿಲ್ಲ. ನಾನು ಬೇಕಾದ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇನೆ. ವೈದ್ಯರ ಮಾರ್ಗದರ್ಶನಗಳಿಗೆ ಅನುಸಾರವಾಗಿ ನಾನು ಮನೆಯಲ್ಲಿ ಪ್ರತ್ಯೇಕ ವಾಸ ಮಾಡುತ್ತಿದ್ದೇನೆ. ನೀವು ಕೂಡ ಮನೆಯಲ್ಲಿ ಸುರಕ್ಷಿತವಾಗಿರಿ’ ಎಂದು ಇನ್ಸ್ಟಾಗ್ರಾಂನಲ್ಲಿ ಅವರು ಬರೆದುಕೊಂಡಿದ್ದಾರೆ.