ಚಿತ್ರದುರ್ಗ, ಅ. 19 (DaijiworldNews/PY): ಮುರುಘಾ ಮಠದ ಶರಣ ಸಂಸ್ಕೃತಿ ಉತ್ಸವದಲ್ಲಿ ಪ್ರದಾನ ಮಾಡುವ ಮುರುಘಾಶ್ರೀ ಪ್ರಶಸ್ತಿಗೆ ನಟ ಮುಖ್ಯಮಂತ್ರಿ ಚಂದ್ರು ಅವರು ಸೇರಿದಂತೆ ಐವರನ್ನು ಆಯ್ಕೆ ಮಾಡಲಾಗಿದೆ.
ರಂಗಭೂಮಿ, ಸಿನಿಮಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ನಟ ಮುಖ್ಯಮಂತ್ರಿ ಚಂದ್ರು ಅವರು ಸೇರಿದಂತೆ ಮದ್ಯಪಾನ ವಿರೋಧಿ ಹೋರಾಟಗಾರ್ತಿ ಸ್ವರ್ಣ ಭಟ್, ಬಸವತತ್ವ ಪ್ರಚಾರಕ ಹುಲುಸೂರು ಗುರುಬಸವೇಶ್ವರ ಮಠದ ಶಿವಾನಂದ ಸ್ವಾಮೀಜಿ, ಧರ್ಮದರ್ಶಿ ಎಸ್.ಷಣ್ಮುಖಪ್ಪ ಹಾಗೂ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಬಿಲ್ಲಪ್ಪ ಅವರು ಆಯ್ಕೆಯಾಗಿದ್ದಾರೆ ಎಂದು ಶಿವಮೂರ್ತಿ ಮುರುಘಾ ಶರಣರು ತಿಳಿಸಿದ್ದಾರೆ.
ಹತ್ತು ಭಾಷೆಗಳಲ್ಲಿ ಮಾತನಾಡಬಲ್ಲ ಹರಿಯಾಣದ 17 ವರ್ಷದ ಬಾಲಕಿ ಜಾಹ್ನವಿ ಪನ್ವಾರ್ ಅವರು ಭರಮಣ್ಣನಾಯಕ ಶೌರ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಈ ಎರಡೂ ಪ್ರಶಸ್ತಿಗಳು 25 ಸಾವಿರ ರೂ.ನಗದು ಹಾಗೂ ಫಲಕವನ್ನು ಹೊಂದಿದೆ. ಪ್ರಶಸ್ತಿ ಪ್ರದಾನವನ್ನು ಅ.24ರಂದು ನಡೆಸಲಾಗುವುದು ಎಂದು ಹೇಳಿದ್ದಾರೆ.