ಬೆಂಗಳೂರು, ಡಿ.28 (DaijiworldNews/HR): ಸ್ಯಾಂಡಲ್ವುಡ್ನ ಖ್ಯಾತ ನಟ, ನಿರ್ದೇಶಕ ಎಸ್. ನಾರಾಯಣ್ ಅವರ ಪುತ್ರ ಪವನ್ ಎಸ್. ನಾರಾಯಣ್ ಅವರು 'ನವಮಿ 9.9.1999' ಸಿನಿಮಾವನ್ನು ನಿರ್ದೇಶಿಸಿದ್ದು, ಇದಕ್ಕೆ ನಾರಾಯಣ್ ನಾಯಕನ ತಂದೆ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ.
ಈ ಸಿನಿಮಾದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದ್ದು, ಫೈಟ್ ಹಾಗೂ ಹಾಡುಗಳ ಚಿತ್ರೀಕರಣ ಬಾಕಿಯಿದೆ. ಬೆಂಗಳೂರು, ಶಿವಗಂಗೆ, ಸಕಲೇಶಪುರದಲ್ಲಿ 40 ದಿನಗಳ ಚಿತ್ರೀಕರಣ ನಡೆದಿದೆ ಎನ್ನಲಾಗಿದೆ.
ಪವನ್ ನಾರಾಯಣ್ ಈಗ ಸ್ವತಂತ್ರ ನಿರ್ದೇಶಕರಾಗಿ ಈ ಸಿನಿಮಾದ ಮೂಲಕ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.
ನವಮಿ 9.9.1999 ಸಿನಿಮಾದಲ್ಲಿ ನಾಯಕ ನಟ ಯಶಸ್ ಅಭಿಯಿಸುತ್ತಿದ್ದು, ಎಸ್. ನಾರಾಯಣ್, ಶಂಕರ್ ಅಶ್ವಥ್, ಓಂ ಪ್ರಕಾಶ್ ರಾವ್, ಹುಚ್ಚ ವೆಂಕಟ್, ಸಂದೀಪ್ ಕುಮಾರ್ ಜಿ.ಎಂ., ಅನುಶ್ರೀ, ಪವಿತ್ರ, ಕುರಿಬಾಂಡ್ ಸುನೀಲ್, ಅರುಣ ಬಾಲರಾಜ್ ಹಾಗೂ ಮುಂತಾದವರು ತಾರಾಬಳಗದಲ್ಲಿದ್ದಾರೆ.