ಬೆಂಗಳೂರು,ಜ.12 (DaijiworldNews/HR): ಖ್ಯಾತ ನಟರಾದ ವಿಜಯ್ ಮತ್ತು ವಿಜಯ್ ಸೇತುಪತಿ ನಟನೆಯ ಮಾಸ್ಟರ್ ಸಿನಿಮಾ ಜನವರಿ 13 ರಂದು ಭರ್ಜರಿ ಬಿಡುಗಡೆಗೆ ಸಜ್ಜಾಗಿತ್ತು, ಆದರೆ ಬಿಡುಗಡೆಗೂ ಮುನ್ನ ಈ ಸಿನಿಮಾ ಆನ್ಲೈನ್ನಲ್ಲಿ ಸೋರಿಕೆಯಾಗಿದೆ ಎನ್ನಲಾಗಿದೆ.
ಈ ಕುರಿತು ಟ್ವೀಟ್ ಮಾಡಿರುವ ಮಾಸ್ಟರ್ ನಿರ್ದೇಶಕ ಲೋಕೇಶ್ ಕನಗರಾಜ್, "ಚಿತ್ರದ ದೃಶ್ಯಗಳು ಸಿಕ್ಕರೆ ದಯವಿಟ್ಟು ಯಾರಿಗೂ ಶೇರ್ ಮಾಡಬೇಡಿ" ನಿಮಗಾಗಿ ಈ ಸಿನಿಮಾವನ್ನು ನಿರ್ಮಿಸಲು ಒಂದೂವರೆ ವರ್ಷ ಕಷ್ಟಪಟ್ಟಿದ್ದೇವೆ. ಚಿತ್ರವನ್ನು ನೀವು ಥಿಯೇಟರ್ಗಳಲ್ಲಿಯೇ ನೋಡಿ ಸಂಭ್ರಮಿಸುತ್ತೀರಿ ಎಂಬ ನಿರೀಕ್ಷೆ ಹೊಂದಿದ್ದೇವೆ. ಸಿನಿಮಾದ ಸೋರಿಕೆಯಾದ ದೃಶ್ಯಗಳು ನಿಮಗೇನಾದರೂ ಸಿಕ್ಕರೆ ದಯವಿಟ್ಟು ಅದನ್ನು ಯಾರಿಗೂ ಹಂಚಬೇಡಿ" ಎಂದು ಮನವಿ ಮಾಡಿಕೊಂಡಿದ್ದಾರೆ.
ಇನ್ನು ಈ ಸಿನಿಮಾದ ದೃಶ್ಯಗಳನ್ನು ಶೇರ್ ಮಾಡದಂತೆ ನಿರ್ದೇಶಕ ಲೋಕೇಶ್ ಕನಗರಾಜ್ ಮನವಿ ಮಾಡುತ್ತಲೇ #masterleaked ಹ್ಯಾಷ್ ಟ್ಯಾಗ್ ಟ್ವಿಟರ್ನಲ್ಲಿ ಟ್ರೆಂಡ್ ಆಗಿದ್ದು, ಹಲವು ಮಂದಿ ಅನೇಕ ರೀತಿಯ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.