ಹೈದರಾಬಾದ್, ಜ.14 (DaijiworldNews/HR): ಹೊಂಬಾಳೆ ಫಿಲಂಸ್ ಬ್ಯಾನರ್ನ ವಿಜಯ್ ಕಿರಗಂದೂರು ನಿರ್ಮಾಣ ಮಾಡುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾ ‘ಸಲಾರ್’ನ ಮೂಹೂರ್ತ ಜ. 15ರಂದು ಬೆಳಿಗ್ಗೆ 11 ಗಂಟೆಗೆ ಹೈದರಾಬಾದ್ನಲ್ಲಿ ಅದ್ಧೂರಿಯಾಗಿ ನೆರವೇರಲಿದೆ.
ಮೂಹೂರ್ತ ಕಾರ್ಯಕ್ರಮಕ್ಕೆ ಚಿತ್ರರಂಗದ ಅನೇಕ ಗಣ್ಯರು ಪಾಲ್ಗೋಳ್ಳುವ ನಿರೀಕ್ಷೆಯಿದ್ದು, ರಾಜ್ಯದ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್, ರಾಕಿಂಗ್ ಸ್ಟಾರ್ ಯಶ್, ಟಾಲಿವುಡ್ನ ಖ್ಯಾತ ನಿರ್ದೇಶಕ ಎಸ್.ಎಸ್. ರಾಜಮೌಳಿ ಹಾಗೂ ವಿಜಯ್ ಕಿರಗಂದೂರು ಭಾಗವಹಿಸಲಿದ್ದಾರೆಂದು ತಿಳಿದು ಬಂದಿದೆ.
ಇನ್ನು ಕೆಜಿಎಫ್ ಖ್ಯಾತಿಯ ಪ್ರಶಾಂತ್ ನೀಲ್ ನಿರ್ದೇಶನ ಮತ್ತು ಟಾಲಿವುಡ್ನ ಖ್ಯಾತನಟ ಪ್ರಭಾಸ್ ಅಭಿನಯದ ಸಲಾರ್ ಸಿನಿಮಾದ ಫಸ್ಟ್ ಲುಕ್, ಪೋಸ್ಟರ್ ಈಗಾಗಲೇ ದೇಶವ್ಯಾಪಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದೆ.
ಜನವರಿ ತಿಂಗಳಾಂತ್ಯಕ್ಕೆ ಚಿತ್ರೀಕರಣ ಆರಂಭಿಸುವ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದ್ದು, ಇನ್ನುಳಿದ ಪಾತ್ರವರ್ಗದ ಮಾಹಿತಿಯನ್ನು ಸದ್ಯದಲ್ಲೇ ರಿವೀಲ್ ಮಾಡುವುದಾಗಿಯೂ ಚಿತ್ರತಂಡ ತಿಳಿಸಿದೆ.