ಪಣಜಿ, ಜ.17 (DaijiworldNews/HR): 51ನೇ ಅಂತರರಾಷ್ಟ್ರೀಯ ಚಲನ ಚಿತ್ರೋತ್ಸವ ಕಾರ್ಯಕ್ರಮ ಗೋವಾದಲ್ಲಿ ನಡೆಯುತ್ತಿದ್ದು, ಕರ್ನಾಟಕದಿಂದ ಸ್ಯಾಂಡಲ್ವುಡ್ ಪ್ರತಿನಿಧಿಯಾಗಿ ನಟ ಕಿಚ್ಚ ಸುದೀಪ್ ಭಾಗವಹಿಸಿದ್ದಾರೆ.
ಸನ್ಮಾನ ಸ್ವೀಕರಿಸಿ ಬಳಿಕ ಮಾತನಾಡಿದ ಸುದೀಪ್, "ಕನ್ನಡ ಚಿತ್ರರಂಗ ಮತ್ತು ಕರ್ನಾಟಕದ ಪರವಾಗಿ ಇಲ್ಲಿ ಭಾಗವಹಿಸುತ್ತಿರುವುದು ತುಂಬಾ ಹೆಮ್ಮೆಯಾಗುತ್ತಿದೆ, ಕೊರೊನಾದಿಂದಾಗಿ ಲಾಕ್ಡೌನ್ ಆಗಿ ಎಲ್ಲರು ಅನೇಕ ಕಷ್ಟಗಳನ್ನು ಅನುಭವಿಸಿ ಇದೀಗ ಮತ್ತೆ ಮೊದಲಿನಂತೆಯೇ ಸಹಜ ಸ್ಥಿತಿಗೆ ಬರುತ್ತಿದೆ" ಎಂದರು.
ನಟ ಕಿಚ್ಚ ಸುದೀಪ್ ಅವರು ಚಿತ್ರರಂಗಕ್ಕೆ ಆಗಮಿಸಿ 25 ವರ್ಷಗಳು ಕಳೆದಿದ್ದು, ಕನ್ನಡದ ಜೊತೆಗೆ ತೆಲುಗು, ತಮಿಳು, ಹಿಂದಿ ಚಿತ್ರಗಳಲ್ಲಿ ನಅಭಿನಯಿಸಿದ್ದು, ಅವರ ಸಾಧನೆಗೆ ಗೋವಾ ಚಲನ ಚಿತ್ರೋತ್ಸವದಲ್ಲಿ ಅವರನ್ನು ಸನ್ಮಾನಿಸಿಸಲಾಗಿದೆ.
ಇನ್ನು ಗೋವಾ ಮುಖ್ಯಮಂತ್ರಿ ಪ್ರದೀಪ್ ಸಾವಂತ್ ಸುದೀಪ್ ಅವರನ್ನು ಸನ್ಮಾನಿಸಿದ್ದು, ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಎನ್ನಲಾಗಿದೆ.