ಬೆಂಗಳೂರು, ಜ.26 (DaijiworldNews/HR): ನಟ, ನೃತ್ಯ ನಿರ್ದೇಶಕ ನಾಗೇಂದ್ರ ಪ್ರಸಾದ್ ಪ್ರಥಮ ಬಾರಿಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದು, ಅವರ ಸಿನಿಮಾದಲ್ಲಿ ಲವ್ ಮಾಕ್ಟೇಲ್ ಖ್ಯಾತಿಯ ಡಾರ್ಲಿಂಗ್ ಕೃಷ್ಣ ಹಾಗೂ ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಒಟ್ಟಿಗೆ ನಟಿಸಲಿದ್ದಾರೆಂಬ ಮಾಹಿತಿ ಚಂದನವನದಲ್ಲಿ ಹರಿದಾಡುತ್ತಿದೆ.
ನಾಗೇಂದ್ರ ಪ್ರಸಾದ್ ಅವರು ತಮಿಳಿನ 'ಓ ಮೈ ಕಾಡುವಲೆ' ಚಿತ್ರದಿಂದ ಸ್ಫೂರ್ತಿ ಪಡೆದು ಈ ಸಿನಿಮಾವನ್ನು ಮಾಡಲಾಗುತ್ತಿದೆಯಂತೆ. ಕನ್ನಡ ಅವತರಣಿಕೆಯಲ್ಲಿ ಹಲವಾರು ಬದಲಾವಣೆಗಳನ್ನು ಮಾಡಿಕೊಳ್ಳಲಾಗಿದೆಯಂತೆ.
ಇನ್ನು ಈ ಸಿನಿಮಾಗೆ ಸಂಬಂಧಿಸಿ ಚಿತ್ರತಂಡದಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ, ಪುನೀತ್ ರಾಜ್ಕುಮಾರ್ ಈ ಸಿನಿಮಾದಲ್ಲಿ ನಟಿಸಲು ಒಪ್ಪಿದ್ದಾರಾ ಇಲ್ಲವಾ ಎಂಬುದು ಕೂಡ ಸ್ಪಷ್ಟವಾಗಿಲ್ಲ. ಈಗ ಪುನೀತ್ 'ಯುವರತ್ನ' ಚಿತ್ರದ ಬಿಡುಗಡೆಗಾಗಿ ಕಾಯುತ್ತಿದ್ದು, ಚೇತನ್ ಕುಮಾರ್ ನಿರ್ದೇಶನದ 'ಜೇಮ್ಸ್' ಚಿತ್ರದ ಶೂಟಿಂಗ್ನಲ್ಲಿ ಬ್ಯುಸಿಯಾಗಿದ್ದಾರೆ.
ಡಾರ್ಲಿಂಗ್ ಕೃಷ್ಣ 'ಲವ್ ಮಾಕ್ಟೇಲ್ 2' ಹಾಗೂ 'ಶ್ರೀಕೃಷ್ಣ@ಜಿಮೇಲ್ ಡಾಟ್ ಕಾಮ್' ಚಿತ್ರಗಳ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ.