ಹೈದರಬಾರ್, ಜ.29 (DaijiworldNews/HR): ರಾಬರ್ಟ್ ಸಿನಿಮಾ ಮಾರ್ಚ್ 11ರಂದು ಬಿಡುಗಡೆಗೆ ಸಿದ್ಧವಾಗಿದ್ದು, ಇದೀಗ ತೆಲುಗು ಆವೃತ್ತಿಯ ಬಿಡುಗಡೆಗೆ ಆಂಧ್ರ ಪ್ರದೇಶದಲ್ಲಿ ವಿರೋಧ ವ್ಯಕ್ತವಾಗಿದೆ.
ಮಾರ್ಚ್ 11ರಂದು ತೆಲುಗಿನ ಎರಡು ಚಿತ್ರಗಳು ಬಿಡುಗಡೆಯಾಗುತ್ತಿದ್ದು, ಅದೇ ಹೊತ್ತಿನಲ್ಲಿ ಕನ್ನಡದ ಡಬ್ ಸಿನಿಮಾ ‘ರಾಬರ್ಟ್’ನ್ನು ಬಿಡುಗಡೆ ಮಾಡುವಂತಿಲ್ಲ ಎಂದು ಅಲ್ಲಿನ ಚಿತ್ರರಂಗ ನಿರ್ಧರಿಸಿದ್ದು ರಾಬರ್ಟ್ಗೆ ಚಿತ್ರಮಂದಿರಗಳಲ್ಲಿ ಪ್ರದರ್ಶನ ಅವಕಾಶ ಕೊಡಬಾರದು ಎಂದು ತಿಳಿಸಿದೆ.
ಇನ್ನು ತೆಲುಗು ಚಿತ್ರರಂಗದ ಈ ನಿರ್ಧಾರದಿಂದ ರಾಬರ್ಟ್ ಚಿತ್ರತಂಡವೂ ಆತಂಕಕ್ಕೆ ಒಳಗಾಗಿದ್ದು, ನಟ ದರ್ಶನ್ ಕೂಡಾ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿರುವ ನಟ ದರ್ಶನ್, "ಕರ್ನಾಟಕದಲ್ಲಿ ತೆಲುಗು ಚಿತ್ರಗಳು ಯಾವುದೇ ಅಡ್ಡಿ ಆತಂಕಗಳಿಲ್ಲದೇ ಬಿಡುಗಡೆ ಆಗುತ್ತಿವೆ. ಆದರೆ ಟಾಲಿವುಡ್ ಕನ್ನಡ ಚಿತ್ರಗಳಿಗೆ ನಿರ್ಬಂಧ ಹೇರಿರುವುದು ಸರಿಯಲ್ಲ. ಅವರು ತಮ್ಮ ನಿರ್ಧಾರ ಬದಲಾಯಿಸಬೇಕು. ಯಾವುದೇ ಅಡ್ಡಿ ಆತಂಕಗಳಿದ್ದರೂ ನಿಗದಿಯಂತೆ ಮಾರ್ಚ್ 11ರಂದು ರಾಬರ್ಟ್ ಚಿತ್ರದ ತೆಲುಗು ಆವೃತ್ತಿಯನ್ನೂ ಬಿಡುಗಡೆ ಮಾಡುತ್ತೇವೆ. ಸಮಸ್ಯೆ ಬಗೆಹರಿಯುವ ವಿಶ್ವಾಸವಿದೆ" ಎಂದು ತಿಳಿಸಿದ್ದಾರೆ.