ಮಂಗಳೂರು, ಫೆ.10 (DaijiworldNews/MB) : ಬಹುನಿರೀಕ್ಷಿತ ತುಳು ಚಿತ್ರ ಗಮ್ಜಾಲ್ನ ಟ್ರೇಲರ್ ಫೆಬ್ರವರಿ 8 ರಂದು ಅಡ್ಯಾರ್ನ ಸಹ್ಯಾದ್ರಿ ಕಾಲೇಜಿನಲ್ಲಿ ಬಿಡುಗಡೆಯಾಗಿದೆ.
ಸಹ್ಯಾದ್ರಿ ಕಾಲೇಜಿನ ಅಧ್ಯಕ್ಷ ಮಂಜುನಾಥ ಭಂಡಾರಿ ಮತ್ತು ಇತರ ಗಣ್ಯರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಂಜುನಾಥ ಭಂಡಾರಿಯವರು, "ಸಹ್ಯಾದ್ರಿ ಕಾಲೇಜಿನಲ್ಲಿ ಹಲವಾರು ತುಳು ಚಲನಚಿತ್ರಗಳನ್ನು ಚಿತ್ರೀಕರಿಸಲಾಗಿದೆ. ಆದರೆ, ಮೊದಲ ಬಾರಿಗೆ ಕಾಲೇಜು ಆವರಣದಲ್ಲಿ ಚಿತ್ರದ ಟ್ರೈಲರ್ ಬಿಡುಗಡೆಯಾಗುತ್ತಿದೆ. ಚಿತ್ರವು ಉತ್ತಮ ಯಶಸ್ಸನ್ನು ಕಾಣಲಿ" ಎಂದು ಹಾರೈಸಿದರು.
ನಟ ರೂಪೇಶ್ ಶೆಟ್ಟಿ, ರಂಗಭೂಮಿ ಮತ್ತು ಚಲನಚಿತ್ರ ನಟ ನವೀನ್ ಡಿ ಪಡೀಲ್, ಪ್ರಸನ್ನ ಬೈಲೂರು, ಸಂದೀಪ್ ಶೆಟ್ಟಿ ಮತ್ತು ಇತರರು ಉಪಸ್ಥಿತರಿದ್ದರು.
ಆರ್ಎಸ್ ಫಿಲ್ಮ್ಸ್, ಶೂಲಿನ್ ಫಿಲ್ಮ್ಸ್ ಮತ್ತು ಮುಗ್ರೊಡಿ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಈ ಚಿತ್ರ ನಿರ್ಮಾಣವಾಗಿದ್ದು, ಸಂಪೂರ್ಣ ಮನರಂಜನೆ ಮತ್ತು ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡುತ್ತದೆ ಎಂದು ಚಿತ್ರತಂಡ ಹೇಳಿದೆ.
ಸುಮನ್ ಸುವರ್ಣ ಮತ್ತು ನವೀನ್ ಶೆಟ್ಟಿ ಈ ಚಿತ್ರವನ್ನು ನಿರ್ದೇಶಿಸಿದ್ದು, ಖ್ಯಾತ ನಟ-ನಿರ್ದೇಶಕ ರೂಪೇಶ್ ಶೆಟ್ಟಿ ಈ ಚಿತ್ರಕ್ಕೆ ಕಥೆ ಮತ್ತು ಚಿತ್ರಕಥೆ ಬರೆದಿದ್ದಾರೆ. ಜೋಯಲ್ ರೆಬೆಲ್ಲೊ ಮತ್ತು ಡ್ಯಾರೆಲ್ ಮಸ್ಕರೇನ್ಹಾಸ್ ಸಂಗೀತ ಸಂಯೋಜಿಸಿದ್ದಾರೆ. ಜನಪ್ರಿಯ ಕೋಸ್ಟಲ್ ವುಡ್ ನಟರಾದ ನವೀನ್ ಡಿ ಪಡೀಲ್, ಭೋಜರಾಜ್ ವಾಮಂಜೂರ್, ಅರವಿಂದ್ ಬೋಳಾರ್, ಪ್ರಸನ್ನ ಶೆಟ್ಟಿ ಬೈಲೂರು, ಸಂದೀಪ್ ಶೆಟ್ಟಿ, ಕರಿಷ್ಮಾ ಮತ್ತು ಇತರ ನಟರು ಈ ಚಿತ್ರದಲ್ಲಿ ನಟಿಸಿದ್ದಾರೆ. ಫೆಬ್ರವರಿ 19 ರಂದು ಚಿತ್ರ ತೆರೆಗೆ ಬರಲಿದೆ.