ಬೆಂಗಳೂರು, ಫೆ. 25 (DaijiworldNews/HR): ದರ್ಶನ್ ಅಭಿಮಾನಿಗಳು ಮತ್ತು ನಟ ಜಗ್ಗೇಶ್ ಅವರ ನಡುವೆ ನಡೆದ ಸಂಘರ್ಷಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕ್ಷಮೆಯಾಚನೆ ಮಾಡಿದ ಬೆನ್ನಲ್ಲೇ "ಮನಸ್ಸು ಹಗುರವಾಯಿತು" ಎಂದು ನವರಸ ನಾಯಕ ಜಗ್ಗೇಶ್ ಹೇಳಿದ್ದಾರೆ.
ಈ ಕುರಿರು ಟ್ವೀಟ್ ಮಾಡಿರುವ ನಟ ಜಗ್ಗೇಶ್, "ಪ್ರೀತಿ ವಿಶ್ವಾಸಕ್ಕೆ ತಾತ್ಕಾಲಿಕ ಸಮಸ್ಯೆ. ವೈಶಾಲ್ಯತೆ ಚಿಂತನೆ ಹೃದಯ ಇದ್ದಾಗ ಅಪನಂಬಿಕೆ ಮೋಡ ಸರಿದು ಮತ್ತೆ ಸೂರ್ಯ ಪ್ರಜ್ವಲಿಸುತ್ತಾನೆ. ಕನ್ನಡಕ್ಕೆ ಒಗ್ಗಟ್ಟಿರಲಿ. ಧನ್ಯವಾದ ದರ್ಶನ್" ಎಂದು ಬರೆದುಕೊಂಡಿದ್ದಾರೆ.
ಇನ್ನು ಮನಸ್ಸು ಹಗುರವಾಯಿತು. ಧನ್ಯವಾದ ಮಾಧ್ಯಮಮಿತ್ರರಿಗೆ, ಧನ್ಯವಾದ ಕನ್ನಡದ ಮನಗಳಿಗೆ. ಇನ್ನೆಂದು ಇಂಥ ದಿನ ಬರದಿರಲಿ ಎಂದು ಹೇಳಿದ್ದಾರೆ.