ಮುಂಬೈ, ಮಾ. 15 (DaijiworldNews/HR) : ಟೀಂ ಇಂಡಿಯಾದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಹಾಗೂ ಕ್ರೀಡಾ ನಿರೂಪಕಿ ಸಂಜನಾ ಗಣೇಶನ್ ಅವರು ಇಂದು ದಾಂಪತ್ಯ ಜೀವನಕ್ಕೆ ಕಾಲಿಟಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಜಸ್ಪ್ರೀತ್ ಬುಮ್ರಾ, "ಪ್ರೀತಿಯ ಜೊತೆಗೆ ಮುಂದೆ ಸಾಗುತ್ತಾ, ನಾವಿಬ್ಬರು ಒಟ್ಟಿಗೆ ಹೊಸ ಪ್ರಯಾಣವನ್ನು ಪ್ರಾರಂಭಿಸಿದ್ದು, ಇಂದು ನಮ್ಮ ಜೀವನದ ಅತ್ಯಂತ ಸಂತೋಷದಾಯಕ ದಿನಗಳಲ್ಲಿ ಒಂದಾಗಿದ್ದು, ನಮ್ಮ ವಿವಾಹದ ಸುದ್ದಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ನಾವು ಸಂತೋಷಪಡುತ್ತೇವೆ" ಎಂದು ಬರೆದುಕೊಂಡಿದ್ದಾರೆ.
ಇನ್ನು ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ನಂತರ ಜಸ್ಪ್ರೀತ್ ಬುಮ್ರಾ ಟೀಂ ಇಂಡಿಯಾದಿಂದ ರಜೆ ಪಡೆದಿದ್ದು, ನಾಲ್ಕನೇ ಟೆಸ್ಟ್ ಪಂದ್ಯದ ಮೊದಲು ಬುಮ್ರಾ ವೈಯಕ್ತಿಕ ಕಾರಣಗಳಿಗಾಗಿ ರಜೆ ಕೋರಿದ್ದಾರೆ ಎಂದು ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿ ತಿಳಿಸಿತ್ತು.
ಸಂಜನಾ ಗಣೇಶನ್ ಮೂಲತಃ ಪುಣೆಯವರಾಗಿದ್ದು, ಮಾಡೆಲಿಂಗ್ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದ ಸಂಜನಾ 2014ರಲ್ಲಿ ಫೆಮಿನಾ ಮಿಸ್ ಇಂಡಿಯಾ ಸೌಂದರ್ಯ ಸ್ಪರ್ಧೆಯ ಫೈನಲಿಸ್ಟ್ ಕೂಡ ಆಗಿದ್ದಾರೆ. 2016ರಲ್ಲಿ ಸ್ಟಾರ್ಸ್ಪೋರ್ಟ್ಸ್ಗೆ ಕ್ರೀಡಾ ನಿರೂಪಕಿಯಾಗಿ ಸೇರ್ಪಡೆಯಾಗಿದ್ದಾರೆ ಎನ್ನಲಾಗಿದೆ.