ನವದೆಹಲಿ,ಮೇ. 08 (DaijiworldNews/HR): ಬಡ ಕೊರೊನಾ ರೋಗಿಗಳ ಆರೈಕೆ ಕೇಂದ್ರವನ್ನು ಬಾಲಿವುಡ್ ಸಿನಿಮಾ ನಿರ್ದೇಶಕ ರೋಹಿತ್ ಶೆಟ್ಟಿ ಸ್ಥಾಪಿಸಿದ್ದು, ಕೊರೊನಾ ವಿರುದ್ಧದ ಹೋರಾಟಕ್ಕೆ ಕೈ ಜೋಡಿಸಿದ್ದಾರೆ.
ನವದೆಹಲಿಯಲ್ಲಿ ಆಕ್ಸಿಜನ್ ಸಹಿತ 25 ಬೆಡ್ಗಳ ಕೊರೊನಾ ಕೇರ್ ಸೆಂಟರ್ ಸ್ಥಾಪಿಸಿರುವ ರೋಹಿತ್, ಆಸ್ಪತ್ರೆ ಬಿಲ್ ಕಟ್ಟಲಾಗದ ಬಡ ರೋಗಿಗಳಿಗೆ ಇಲ್ಲಿ ಬೆಡ್ ವ್ಯವಸ್ಥೆ ಮಾಡಲಾಗಿದ್ದು, ಊಟ ಸೇರಿದಂತೆ ಹಲವು ಸೌಲಭ್ಯವಗಳನ್ನು ಉಚಿತವಾಗಿ ನೀಡಲಾಗುತ್ತಿದೆ.
ಇನ್ನು ರೋಹಿತ್ ಶೆಟ್ಟಿಯವರ ಈ ಸಾಮಾಜಿಕ ಕಾರ್ಯಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗಿದ್ದು, ರಾಜಕೀಯ ನಾಯಕ ಮಂಜಿಂದರ್ ಸಿಂಗ್ ಅವರು ರೋಹಿತ್ ಶೆಟ್ಟಿಯವರ ಕಾರ್ಯವನ್ನು ಶ್ಲಾಘಿಸಿದ್ದಾರೆ.
ಅನೇಕ ಬಾಲಿವುಡ್ ತಾರೆಯರು ಕೊರೊನಾ ವಿರುದ್ಧ ಹೋರಾಟಕ್ಕೆ ಕೈ ಜೋಡಿಸಿದ್ದು, ನಟ ಅಕ್ಷಯ್ ಕುಮಾರ್, ಸಲ್ಮಾನ್ ಖಾನ್,ಸೋನು ಸೂದ್, ತಾಪ್ಸಿ ಪನ್ನು, ಜಾಕ್ವೆಲಿನ್ ಫರ್ನಾಂಡಿಸ್ ಸೇರಿದಂತೆ ಅನೇಕ ನಟ-ನಟಿಯರು ತಮ್ಮ ಕೈಲಾದಷ್ಟು ಸಹಾಯ ಮಾಡುತ್ತಿದ್ದಾರೆ.