ಮುಂಬೈ, ಮೇ.23 (DaijiworldNews/HR): ಬಾಲಿವುಡ್ ನಟ ಅರ್ಜುನ್ ಕಪೂರ್ ಮತ್ತು ಮಲೈಕಾ ಅರೋರಾ ತಮ್ಮ ಸಂಬಂಧದ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದು ತುಂಬಾ ಕಡಿಮೆ. ಈಗ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅರ್ಜುನ್ ಕಪೂರ್ ಕೆಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ ಎನ್ನಲಾಗಿದೆ.
ಬಾಲಿವುಡ್ ನಟ ಅರ್ಜುನ್ ಕಪೂರ್ ಮತ್ತು ನಟಿ ಮಲೈಕಾ ಅರೋರಾ ಇಬ್ಬರ ನಡುವೆ ಅತಿ ಅಪರೂಪದ ಸಂಬಂಧ ಇದೆ. ಒಂದು ಕಾಲದಲ್ಲಿ ಟಾಪ್ ಐಟಂ ಡ್ಯಾನ್ಸರ್ ಆಗಿದ್ದ ಮಲೈಕಾ ಅರೋರಾ ಅವರಿಗೆ ಈಗ 47 ವರ್ಷ ವಯಸ್ಸು. ಅವರನ್ನು ಪ್ರೀತಿಸುತ್ತಿರುವ ನಟ ಅರ್ಜುನ್ ಕಪೂರ್ಗೆ 35 ವರ್ಷ ಈ ಬಗ್ಗೆ ಈಗ ಅರ್ಜುನ್ ಕಪೂರ್ ಮಾತನಾಡಿದ್ದಾರೆ.
ಅರ್ಜುನ್ ಕಪೂರ್ ಮತ್ತು ಮಲೈಕಾ ಅರೋರಾ ತುಂಬಾ ಆತ್ಮೀಯವಾಗಿರುವ ಫೋಟೋಗಳು ಅವರ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಕಾಣಸಿಗುತ್ತವೆ. ಆದರೆ ಈ ಜೋಡಿ ತಮ್ಮ ಸಂಬಂಧದ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದು ಕಡಿಮೆ.
ಇನ್ನು ಇದೀಗ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅರ್ಜುನ್ ಕಪೂರ್ ಕೆಲವು ವಿಚಾರಗಳನ್ನು ಹಂಚಿಕೊಂಡಿದ್ದು, ನನ್ನ ಖಾಸಗಿ ಜೀವನದ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ. ಯಾಕೆಂದರೆ ನಾವು ನಮ್ಮ ಸಂಗಾತಿಯನ್ನು ಗೌರವಿಸಬೇಕು ಎಂದು ಹೇಳಿದ್ದಾರೆ.
ಮಲೈಕಾ ಅವರು ನಟ, ನಿರ್ಮಾಪಕ ಅರ್ಬಾಜ್ ಖಾನ್ ಜೊತೆ ಮದುವೆ ಆಗಿದ್ದು, ಬಳಿಕ ಡಿವೋರ್ಸ್ ಪಡೆದು ದೂರಾಗಿರುವ ಅವರಿಗೆ ಅರ್ಹಾನ್ ಖಾನ್ ಎಂಬ ಮಗ ಇದ್ದಾನೆ. ಆತನ ಬಗ್ಗೆಯೂ ಅರ್ಜುನ್ ಕಾಳಜಿ ಹೊಂದಿದ್ದಾರೆ ಎನ್ನಲಾಗಿದೆ.