ಮುಂಬೈ, ಜೂ.5(DaijiworldNews/HR): ಬಾಲಿವುಡ್ ನಟಿ ಯಾಮಿ ಗೌತಮ್ ತಮ್ಮ ಬಹುಕಾಲದ ಗೆಳೆಯ ಆದಿತ್ಯ ಧಾರ್ ಜೊತೆ ಸಪ್ತಪದಿ ತುಳಿದಿದ್ದು, ತಮ್ಮ ವಿವಾಹ ಸಮಾರಂಭದ ಫೋಟೋವೊಂದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಯುಆರ್ಐ ಸಂಸ್ಥೆಯಲ್ಲಿ ನಿರ್ದೇಶಕರಾಗಿದ್ದ, ಆದಿತ್ಯ ಧಾರ್ ಅವರೊಂದಿಗೆ ಸರಳವಾಗಿ ಹಸೆಮಣೆ ಏರಿದ್ದಾರೆ.
ಇನ್ನು ತಮ್ಮ ವಿವಾಹದ ಫೋಟೋವನ್ನು ಯಾಮಿ ತಮ್ಮ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, "ನಿನ್ನ ನಾನು ಪ್ರೀತಿಸುವುದನ್ನು ಕಲಿತೆ. ನಮ್ಮ ಕುಟುಂಬದ ಆಶೀರ್ವಾದದೊಂದಿಗೆ ನಾವಿಬ್ಬರೂ ಇಂದು ಆತ್ಮೀಯರ ಸಮ್ಮುಖದಲ್ಲಿ ವಿವಾಹವಾದೆವು. ಕೆಲವೇ ಆಪ್ತರಷ್ಟರ ಮುಂದೆ ನಮ್ಮ ವಿವಾಹ ನಡೆಯಿತು. ನಾವು ಪ್ರೀತಿ ಮತ್ತು ಸ್ನೇಹದ ಪಯಾಣವನ್ನು ಆರಂಭಿಸುತ್ತಿರುವ ಈ ಸಂದರ್ಭದಲ್ಲಿ ನಿಮ್ಮ ಆಶೀರ್ವಾದ ಹಾಗೂ ಶುಭಾಶಯವನ್ನು ಬಯಸುತ್ತೇವೆ" ಎಂದು ಬರೆದುಕೊಂಡಿದ್ದಾರೆ.
ಬಾಲಿವುಡ್ನಲ್ಲಿ ಯಾಮಿ ಗೌತಮ್ ನಟನೆಯ ಭೂತ್ ಪೊಲೀಸ್, ದಾವಿ ಸಿನಿಮಾ ಬಿಡುಗಡೆಗೆ ತಯಾರಾಗಿದ್ದು, ಎಥರ್ಸ್ ಡೇ ಸಿನಿಮಾದಲ್ಲಿ ಬಣ್ಣಹಚ್ಚಲಿದ್ದಾರೆ.