ಬೆಂಗಳೂರು, ಜೂ.28 (DaijiworldNews/HR): ನಟಿ ತಮನ್ನಾ ಭಾಟಿಯಾ ಮತ್ತು ವಿಜಯ್ ಸೇತುಪತಿ ಬಹುಭಾಷೆಯಲ್ಲಿ ಫೇಮಸ್ ಆಗಿದ್ದು, ಇವರಿಬ್ಬರು ಸಿನಿಮಾ ಹೊರತಾದ ಒಂದು ಕೆಲಸಕ್ಕೆ ಕೈ ಹಾಕಿದ್ದು, ಆ ಕೆಲಸದ ಕಾರಣದಿಂದಲೇ ಬೆಂಗಳೂರಿನಲ್ಲಿ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ.
ದಕ್ಷಿಣ ಭಾರತದ ಎಲ್ಲ ಭಾಷೆಯ ಕಿರುತೆರೆಯಲ್ಲಿ ಆರಂಭ ಆಗಲಿರುವ ‘ಮಾಸ್ಟರ್ ಶೆಫ್’ ಅಡುಗೆ ಕಾರ್ಯಕ್ರಮವನ್ನು ನಡೆಸಿಕೊಡಲು ತಮನ್ನಾ ಭಾಟಿಯಾ ಮತ್ತು ವಿಜಯ್ ಸೇತುಪತಿ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.
ಇನ್ನು ತೆಲುಗಿನಲ್ಲಿ ತಮನ್ನಾ ಹಾಗೂ ತಮಿಳಿನಲ್ಲಿ ವಿಜಯ್ ಸೇತುಪತಿ ಈ ಶೋ ನಿರೂಪಿಸಲಿದ್ದು, ಶೀಘ್ರದಲ್ಲೇ ‘ಮಾಸ್ಟರ್ ಶೆಫ್’ ಕಾರ್ಯಕ್ರಮ ಪ್ರಸಾರ ಆಗಲಿದ್ದು, ಅದರ ಶೂಟಿಂಗ್ ಈಗಾಗಲೇ ಶುರುವಾಗಿದೆ.
ಬೆಂಗಳೂರಿನ ಸ್ಟುಡಿಯೋವೊಂದರಲ್ಲಿ ಈ ಕಾರ್ಯಕ್ರಮದ ಪ್ರೋಮೋ ಶೂಟಿಂಗ್ ನಡೆಯುತ್ತಿದ್ದು, ತಮನ್ನಾ ಭಾಟಿಯಾ ಮತ್ತು ವಿಜಯ್ ಸೇತುಪತಿ ಒಟ್ಟಿಗೆ ಆಗಮಿಸಿದ್ದಾರೆ. ಒಂದೇ ಸ್ಥಳದಲ್ಲಿ ಚಿತ್ರೀಕರಣ ನಡೆಯುತ್ತಿದ್ದು, ಇಬ್ಬರೂ ಜೊತೆಯಾಗಿ ಫೋಟೋಗೆ ಪೋಸ್ ನೀಡಿದ್ದಾರೆ. ಆ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿರುವ ತಮನ್ನಾ ಅವರು ಸಂಭ್ರಮಿಸಿದ್ದಾರೆ.