ಬೆಂಗಳೂರು, ಜು 08 (DaijiworldNews/PY): ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ನಟ ದುನಿಯಾ ವಿಜಯ್ ಅವರ ತಾಯಿ ನಾರಾಯಣಮ್ಮ ಅವರು ಇಂದು ನಿಧನರಾಗಿದ್ದಾರೆ.
ವಿಜಯ್ ಅವರ ತಾಯಿ ನಾರಾಯಣಮ್ಮ ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಇಂದು ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.
ಈ ಬಗ್ಗೆ ವಿಜಯ್ ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದು, ಅಮ್ಮ ಮತ್ತೆ ಹುಟ್ಟಿ ಬಾ ಎಂದು ಬರೆದುಕೊಂಡಿದ್ದು, ತನ್ನ ತಾಯಿ ಜೊತೆಗಿದ್ದ ಫೋಟೋವನ್ನು ಹಾಕಿಕೊಂಡಿದ್ದಾರೆ.
ಆನೇಕಲ್ನ ಕುಂಬಾರ ಹಳ್ಳಿಯಲ್ಲಿ ನಾರಾಯಣಮ್ಮ ಅವರ ಅಂತಿಮ ವಿಧಿವಿಧಾನ ನಡೆಸಲು ಕುಟುಂಬಸ್ಥರು ತೀರ್ಮಾನಿಸಿದ್ದು, ನಾಳೆ ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಲಿದೆ.
ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದ ನಾರಾಯಣಮ್ಮ ಅವರಿಗೆ ಬ್ರೇನ್ ಸ್ಟ್ರೋಕ್ ಆಗಿತ್ತು. ಮೆದುಳಿನಲ್ಲಿ ಬ್ಲಡ್ ಕ್ಯಾಟ್ ಆಗಿದ್ದರಿಂದ ಅವರು ಹಾಸಿಗೆ ಹಿಡಿದಿದ್ದರು. ಅಮ್ಮನಿಗೆ ಆಸ್ಪತ್ರೆಗೆ ಹೋಗಲು ಇಷ್ಟವಿಲ್ಲ. ಹಾಗಾಗಿ ಮನೆಯಲ್ಲಿಯೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ತಾಯಿ ಮತ್ತೆ ಸಿಗಲ್ಲ. ಅವರು ಇರುವವರೆಗೂ ಅವರನ್ನು ಚೆನ್ನಾಗಿ ನೋಡಿಕೊಳ್ಳಬೇಕು ಎನ್ನುವುದು ನನ್ನ ಆಸೆ. ಅವರ ಆರೋಗ್ಯ ದಿನಂಪ್ರತಿ ಕ್ಷೀಣಿಸುತ್ತಿದೆ. ಆದರೆ, ಮತ್ತೆ ಅವರ ಆರೋಗ್ಯ ಸರಿಯಾಗುತ್ತದೆ ಎನ್ನುವ ವಿಶ್ವಾಸವಿದೆ ಎಂದು ಈ ಹಿಂದೆ ವಿಜಯ್ ಅವರು ಹೇಳಿದ್ದರು.