ಮುಂಬೈ, ಜು.24 (DaijiworldNews/HR): ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರ ಅವರನ್ನು ಪೋರ್ನ್ ಚಿತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದು, ಈ ಕುರಿತಾಗಿ ಶಿಲ್ಪಾ ಶೆಟ್ಟಿ ವಿಚಾರಣೆಗೆ ಒಳಪಟ್ಟಿದ್ದಾರೆ.
ಅಶ್ಲೀಲ ಸಿನಿಮಾ ಚಿತ್ರೀಕರಣದ ವಿಚಾರದಲ್ಲಿ ತನ್ನ ಸಹಭಾಗಿತ್ವ ಏನೂ ಇಲ್ಲ. ರಾಜ್ ಕುಂದ್ರಾ ಮಾಡಿದ್ದು ಕಾಮೋದ್ರೇಕದ ಸಿನಿಮಾಗಳು ಮಾತ್ರ. ಅವುಗಳು ಅಶ್ಲೀಲ ಸಿನಿಮಾಗಳಲ್ಲ. ಹಾಗಾಗಿ ನನ್ನ ಗಂಡ ನಿರಪರಾಧಿ ಎಂದು ಅವರು ವಾದಿಸುತ್ತಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ.
ಇನ್ನು ರಾಜ್ ಕುಂದ್ರಾ ಕೂಡ ಪೊಲೀಸರ ಎದುರು ಇದನ್ನೇ ವಾದಿಸುತ್ತಿದ್ದು, ಅವರು ತನಿಖೆಗೆ ಸರಿಯಾಗಿ ಸಹಕರಿಸುತ್ತಿಲ್ಲ ಎನ್ನಲಾಗಿದೆ. ಆ ಕಾರಣದಿಂದಲೇ ಜು.27ರವರೆಗೆ ಅವರನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ನಟಿಯರನ್ನು ಮತ್ತು ಮಾಡೆಲ್ಗಳನ್ನು ಬಳಸಿಕೊಂಡು ರಾಜ್ ಕುಂದ್ರಾ ಅವರು ನೀಲಿ ಚಿತ್ರಗಳನ್ನು ತಯಾರಿಸುತ್ತಿದ್ದರು ಎಂಬುದಕ್ಕೆ ಪೊಲೀಸರ ಬಳಿ ಹಲವು ಸಾಕ್ಷ್ಯಗಳು ಇವೆ ಎನ್ನಲಾಗಿದೆ.