ಮುಂಬೈ, ಆ.23 (DaijiworldNews/HR): ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಅವರು ಶೂಟಿಂಗ್ ವೇಳೆ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ತಮಿಳಿನ 'ಓಟು ಸೇರಪ್ಪು ಸೈಜ್ 7' ಸಿನಿಮಾ ಹಿಂದಿಗೆ ರಿಮೇಕ್ ಆಗುತ್ತಿದ್ದು, ಈ ಸಿನಿಮಾದಲ್ಲಿ ಅಭಿಷೇಕ್ ಬಚ್ಚನ್ ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ವೇಳೆ ಈ ನಟ ಕೈಗೆ ಗಾಯವಾಗಿದ್ದು, ತಕ್ಷಣವೇ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ಆಸ್ಪತ್ರೆಯ ಹೊರಗೆ ಅಮಿತಾಬ್ ಬಚ್ಚನ್ ಸೇರಿದಂತೆ ಅವರ ಕುಟುಂಬದವರು ನಿಂತಿರುವ ಫೋಟೊ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ.
ಆದರೆ ಅಭಿಷೇಕ್ ಬಚ್ಚನ್ ಅವರಿಗೆ ನಿಜವಾಗಿ ಏನಾಗಿದೆ ಎಂಬುದರ ಕುರಿತು ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲವಾದರೂ ಅವರ ಕೈಗೆ ಪೆಟ್ಟಾಗಿದೆ ಎಂದು ಹೇಳಲಾಗಿದೆ.