ಮುಂಬೈ, ಆ.31 (DaijiworldNews/HR): ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿಯವರು ತನ್ನ ಪತಿ ರಾಜ್ ಕುಂದ್ರಾ ಅವರ ಮನೆ ತೊರೆದು ಮಕ್ಕಳ ಜೊತೆ ಪ್ರತ್ಯೇಕ ವಾಸ ಮಾಡಲು ಮುಂದಾಗಿದ್ದಾರೆ ಎನ್ನುವ ಸುದ್ದಿಯೊಂದು ಸಖತ್ ಸದ್ದು ಮಾಡುತ್ತಿದೆ.
ಶಿಲ್ಪಾ ಶೆಟ್ಟಿಯ ಪತಿ ರಾಜ್ ಕುಂದ್ರಾ ಅವರನ್ನು ಅಶ್ಲೀಲ ಸಿನಿಮಾ ನಿರ್ಮಾಣ ಹಾಗೂ ವಿತರಣೆಯ ಆರೋಪದಲ್ಲಿ ಮುಂಬೈ ಪೊಲೀಸರು ಬಂಧಿಸಿದ್ದು, ಕಳೆದ ಒಂದು ತಿಂಗಳಿಂದ ಅವರು ಜೈಲಿನಲ್ಲಿದ್ದಾರೆ.
ಈ ಪ್ರಕರಣ ಬೆಳಕಿಗೆ ಬಂದ ಬಳಿಕ ಶಿಲ್ಪಾ ಶೆಟ್ಟಿ ಅವರ ವೈಯಕ್ತಿಕ ಜೀವನ ಮತ್ತು ವೃತ್ತಿ ಜೀವನದ ಮೇಲೆ ದೊಡ್ದ ಮಟ್ಟದಲ್ಲಿ ಪ್ರಭಾವ ಬೀರಿದೆ ಎನ್ನಲಾಗಿದೆ.
ಇನ್ನು ರಾಜ್ ಕುಂದ್ರಾ ಅವರ ರಹಸ್ಯ ಬೆಳಕಿಗೆ ಬಂದಾಗಿನಿಂದ ಶಿಲ್ಪಾ ಶೆಟ್ಟಿ ಆಘಾತಕ್ಕೊಳಗಾಗಿದ್ದು, ಅವರು ಪತಿ ಮನೆಯನ್ನು ತೊರೆದು ಬೇರೆ ಕಡೆ ವಾಸಮಾಡಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ.