ಬೆಂಗಳೂರು, ಸ. 13 (DaijiworldNews/HR): ಖ್ಯಾತ ನಟಿ ಸಮಂತಾ ಅವರ ವೈಯಕ್ತಿಕ ಜೀವನದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದರೂ ಆ ಬಗ್ಗೆ ಅವರು ಮೌನ ವಹಿಸಿದ್ದಾರೆ. ನಾಗ ಚೈತನ್ಯ ಜತೆ ಸಮಂತಾ ವಿಚ್ಛೇದನ ಪಡೆದುಕೊಳ್ಳುತ್ತಿದ್ದಾರೆ ಎನ್ನುವ ವದಂತಿ ಅಭಿಮಾನಿಗಳಿಗೆ ಶಾಕ್ ನೀಡಿದೆ.
ನಾಗ ಚೈತನ್ಯ ಹಾಗೂ ಸಾಯಿ ಪಲ್ಲವಿ ನಟನೆಯ 'ಲವ್ ಸ್ಟೋರಿ' ಸಿನಿಮಾ ಟ್ರೇಲರ್ ಇಂದು ಬಿಡುಗಡೆ ಆಗಿದ್ದು, ಇದಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅನೇಕ ಸೆಲೆಬ್ರಿಟಿಗಳು ಈ ಟ್ರೇಲರ್ ಪೋಸ್ಟ್ ಮಾಡಿ, ಅದನ್ನು ವೀಕ್ಷಿಸುವಂತೆ ಅಭಿಮಾನಿಗಳ ಬಳಿ ಕೋರುತ್ತಿದ್ದಾರೆ. ಸಮಂತಾ ಕೂಡ ಈ ಬಗ್ಗೆ ಪೋಸ್ಟ್ ಮಾಡಿ ಎಲ್ಲಾ ವದಂತಿಗೆ ತೆರೆ ಎಳೆಯುತ್ತಾರೆ ಎಂದು ಅಭಿಮಾನಿಗಳು ಕಾದು ಕೂತಿದ್ದರು. ಆದರೆ ಈ ನಿರೀಕ್ಷೆ ಸುಳ್ಳಾಗಿದೆ.
ಇನ್ನು ಸಮಂತಾ ಇನ್ಸ್ಟಾಗ್ರಾಮ್ನಲ್ಲಿ ಬೇರೆ ಬೇರೆ ಸ್ಟೇಟಸ್ಗಳನ್ನು ಹಾಕಿಕೊಳ್ಳುತ್ತಿದ್ದಾರೆ. ಆದರೆ, ಅವರು ಎಲ್ಲಿಯೂ 'ಲವ್ ಸ್ಟೋರಿ' ಬಗ್ಗೆ ಉಲ್ಲೇಖ ಮಾಡಿ ಪೋಸ್ಟ್ ಮಾಡಿಲ್ಲ. ಇದು ಸಾಕಷ್ಟು ಅಚ್ಚರಿ ಮೂಡಿಸಿದ್ದು, ಇದು ವಿಚ್ಛೇದನ ವದಂತಿಗೆ ಸಾಕ್ಷ್ಯ ಒದಗಿಸಿದಂತಾಗಿದೆ.
ಗಂಡ ಎಂದ ಮಾತ್ರಕ್ಕೆ ಈ ಬಗ್ಗೆ ಪೋಸ್ಟ್ ಮಾಡಲೇಬೇಕೆಂದೇನೂ ಇಲ್ಲ ಎಂದು ಸಮಂತಾ ಪರ ಕೆಲವರು ವಕಾಲತ್ತು ವಹಿಸಿಕೊಂಡು ಬಂದಿದ್ದಾರೆ.