ಮುಂಬೈ, ಸೆ 22 (DaijiworldNews/MS): ಎರಡು ಬಾರಿ ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿರುವ ಆಟಗಾರ್ತಿ ಪಿ ವಿ ಸಿಂಧು ಜೊತೆ ದೀಪಿಕಾ ಪಡುಕೋಣೆ ಬ್ಯಾಡ್ಮಿಂಟನ್ ಆಟ ಆಡಿದ್ದು, ಈ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಅಪ್ಲೋಡ್ ಮಾಡಿ ಅನುಭವ ಹಂಚಿಕೊಂಡಿದ್ದಾರೆ.
ಸಿಂಧು ಜೊತೆ ಆಟವಾಡಿರುವ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ದೀಪಿಕಾ ಪಡುಕೋಣೆ ಶೇರ್ ಮಾಡಿಕೊಂಡಿದ್ದಾರೆ. ಇದು ನನ್ನ ನಿತ್ಯ ಜೀವನ.. ಕ್ಯಾಲೊರಿಯನ್ನು ಬರ್ನ್ ಮಾಡಲು ಸಿಂಧು ಜೊತೆ ಬ್ಯಾಡ್ಮಿಂಟನ್ ಆಟವಾಡಿದೆ ಎಂದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಪಿವಿ ಸಿಂಧು ಎಷ್ಟು ಕ್ಯಾಲರಿ ಬರ್ನ್ ಆಯಿತು ಎಂದು ಅವರ ಕಾಲೆಳೆದಿದ್ದಾರೆ.
ಕಳೆದ ಕೆಲವು ದಿನಗಳ ಹಿಂದೆ ಸಿಂಧುಗಾಗಿ ಔತಣ ಕೂಟ ಆಯೋಜಿಸಿದ್ದರು ದಿಪೀಕಾ ಮುಂಬೈನ ರೆಸ್ಟೋರೆಂಟ್ನಲ್ಲಿ ದೀಪಿಕಾ ಪಡುಕೋಣೆ, ರಣವೀರ್ ಸಿಂಗ್ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧುಗೆ ವಿಶೇಷ ಔತಣ ಕೂಟ ಆಯೋಜಿಸಿದ್ದರು.
ಇನ್ನು ನಟಿ ದೀಪಿಕಾ ಪಡುಕೋಣೆ ತಂದೆ ಪ್ರಕಾಶ್ ಪಡುಕೋಣೆ ಕೂಡ ಬ್ಯಾಡ್ಮಿಂಟನ್ ಚಾಂಪಿಯನ್ ಆಗಿದ್ದರು. ನಟಿ ದೀಪಿಕಾ ಕೂಡ ರಾಷ್ಟ್ರೀಯ ಮಟ್ಟದ ಬ್ಯಾಡ್ಮಿಂಟನ್ ಪಟುವಾಗಿದ್ದಾರೆ.