ಮುಂಬೈ, ಅ.02 (DaijiworldNews/HR): ಟಾಲಿವುಡ್ನ ಸ್ಟಾರ್ ದಂಪತಿಗಳಾಗಿದ್ದ ನಾಗ ಚೈತನ್ಯ ಮತ್ತು ಸಮಂತಾ ಅಕ್ಕಿನೇನಿ ನಾಲ್ಕು ವರ್ಷದ ತಮ್ಮ ದಾಂಪತ್ಯಕ್ಕೆ ಅಂತ್ಯ ಹಾಡಿ ವಿಚ್ಛೇದನ ಪಡೆದುಕೊಂಡಿದ್ದಾರೆ.
ಈ ಕುರಿತು ನಾಗ ಚೈತನ್ಯ ಮತ್ತು ಸಮಂತಾ ತಮ್ಮ ಇನ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದು, ನಾವಿಬ್ಬರು ಬಹಳ ಆಲೋಚನೆ ಮಾಡಿದ ಬಳಿಕ ಪತಿ-ಪತ್ನಿಯಾಗಿ ಬೇರೆಯಾಗಲು ನಿರ್ಧರಿಸಿದ್ದೇವೆ. ದಶಕಗಳ ಕಾಲ ಸ್ನೇಹಿತರಾಗಿ ಇದ್ದಿದ್ದಕ್ಕೆ ನಾವಿಬ್ಬರೂ ಅದೃಷ್ಟ ಮಾಡಿದ್ದೆವು. ಆ ಸ್ನೇಹವೇ ನಮ್ಮ ಸಂಬಂಧದ ಶಕ್ತಿಯಾಗಿತ್ತು. ಯಾವಾಗಲೂ ನಮ್ಮ ನಡುವೆ ವಿಶೇಷ ಬಂಧ ಇರಲಿದೆ ಎಂದು ನಂಬಿದ್ದೇವೆ. ಈ ಕಷ್ಟದ ಸಂದರ್ಭದಲ್ಲಿ ನಮಗೆ ಬೆಂಬಲ ನೀಡಲು ಅಭಿಮಾನಿಗಳು, ಮಾಧ್ಯಮದವರು ಮತ್ತು ಹಿತೈಷಿಗಳಲ್ಲಿ ಮನವಿ ಮಾಡುತ್ತೇವೆ. ಜೀವನದಲ್ಲಿ ಮುಂದಕ್ಕೆ ಸಾಗಲು ನಮಗೆ ಬೇಕಾಗಿರುವ ಖಾಸಗಿತನಕ್ಕೆ ಅವಕಾಶ ಮಾಡಿಕೊಡಿ" ಎಂದು ಬರೆದುಕೊಂಡಿದ್ದಾರೆ.
ನಾಗ ಚೈತನ್ಯ ಮತ್ತು ಸಮಂತಾರ ಸಂಸಾರದಲ್ಲಿ ಬಿರುಗಾಳಿ ಎದ್ದಿದೆ ಎಂಬ ಅನುಮಾನ ಕೆಲವು ದಿನಗಳಿಂದಲೂ ಕೇಳಿಬರುತ್ತಿದ್ದು, ಈ ಬಗ್ಗೆ ಅವರ ಕುಟುಂಬದ ಯಾರೊಬ್ಬರೂ ಅಧಿಕೃತ ಹೇಳಿಕೆ ನೀಡಿರಲಿಲ್ಲ.