ಬೆಂಗಳೂರು, ನ. 02 (DaijiworldNews/HR): ಡಾ. ರಾಜ್ಕುಮಾರ್ ಟ್ರಸ್ಟ್ನಿಂದ ಪ್ರತಿ ವರ್ಷ ಸಾಧಕರಿಗೆ ಪ್ರಶಸ್ತಿ ನೀಡಲಾಗುತ್ತಿದ್ದು, ಅದನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಬೇಕು ಎಂದು ಪುನೀತ್ ರಾಜ್ಕುಮಾರ್ ಆಸೆಪಟ್ಟಿದ್ದರೆಂದು ರಾಘವೇಂದ್ರ ರಾಜ್ಕುಮಾರ್ ಹೇಳಿದ್ದಾರೆ.
ರಾಘವೇಂದ್ರ ರಾಜ್ಕುಮಾರ್ ಅವರು ತಮ್ಮನ ನೆನೆದು ತಮ್ಮ ಇನ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದು, "ಇತ್ತೀಚೆಗೆ ನನಗೆ ದಾದಾಸಾಹೇಬ್ ಫಾಲ್ಕೆ ಎಮ್ಎಸ್ಕೆ ಟ್ರಸ್ಟ್ ವತಿಯಿಂದ ಜೀವಮಾನ ಸಾಧನೆ ಪ್ರಶಸ್ತಿ ಬಂದ ಸಂದರ್ಭದಲ್ಲಿ ಅಪ್ಪುಗೆ ಎಲ್ಲಿಲ್ಲದ ಸಂತೋಷ. ನನ್ನನ್ನು ತಕ್ಷಣ ಭೇಟಿ ಮಾಡಿ, ಈ ಸೆಲ್ಫಿ ತೆಗೆದು, ರಾಘಣ್ಣ.. ನಾವೂ ಸಹ ಈ ಮೂರ್ತಿಯ ರೂಪದ ಹಾಗೆ ಅಪ್ಪಾಜಿಯವರ ಮೂರ್ತಿಯನ್ನು ಮಾಡಿ ಎಂದಿನಂತೆ ಡಾ. ರಾಜ್ಕುಮಾರ್ ಟ್ರಸ್ಟ್ನಿಂದ ನೀಡುವ ಪ್ರಶಸ್ತಿಯನ್ನು ಇದೇ ರೂಪದಲ್ಲಿ ಮಾಡೋಣ ಅಂತ ಹೇಳಿದ್ದನು. ಅಪ್ಪು ನಿನ್ನ ಆಲೋಚನೆಗೆ ನನ್ನದೊಂದು ನಮನ. ಲವ್ ಯೂ ಮಗನೆ" ಎಂದು ಬರೆದುಕೊಂಡಿದ್ದಾರೆ.
ಇನ್ನು ಕಂಠೀರವ ಸ್ಡುಡಿಯೋ ಆವರಣದಲ್ಲಿ ಪುನೀತ್ ರಾಜ್ಕುಮಾರ್ ಅವರ ಅಂತ್ಯಕ್ರಿಯೆ ನಡೆದಿದ್ದು, ಮೂರನೇ ದಿನವಾದ ಇಂದು ಕುಟುಂಬದವರು ಸಮಾಧಿಗೆ ಹಾಲು ತುಪ್ಪ ಬಿಡುವ ಕಾರ್ಯ ನೆರವೇರಿಸಿದ್ದಾರೆ.