ಬೆಂಗಳೂರು, ಡಿ.19 (DaijiworldNews/HR): 'ಪುಷ್ಪ' ಸಿನಿಮಾ ಪ್ರಚಾರದಲ್ಲಿ ಪಾಲ್ಗೊಂಡಿದ್ದ ನಟಿ ರಶ್ಮಿಕಾ ಮಂದಣ್ಣ ಹಿಂದಿಯಲ್ಲಿ ಮಾತನಾಡಿ ಜನರನ್ನು ಸೆಳೆಯುವ ಪ್ರಯತ್ನದ ವಿಡಿಯೋವೊಂದು ವೈರಲ್ ಆಗಿದ್ದು, ಅದಕ್ಕೆ ಅನೇಕರು ನೆಗೆಟಿವ್ ಕಮೆಂಟ್ ಮಾಡಿದ್ದಾರೆ.
ರಶ್ಮಿಕಾ ನಟಿಸಿರುವ 'ಪುಷ್ಪ' ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿದ್ದು, ಈ ಚಿತ್ರದ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ್ದ ಅವರು ಹಿಂದಿಯಲ್ಲಿ ಮಾತನಾಡಲು ಪ್ರಯತ್ನಿಸಿದರು. ಆದರೆ ಅದನ್ನು ಕಂಡು ನೆಟ್ಟಿಗರು ಅಸಮಾಧಾನಗೊಂಡಿದ್ದಾರೆ. ರಶ್ಮಿಕಾ ಅವರದ್ದು ಬರೀ ಓವರ್ ಆ್ಯಕ್ಟಿಂಗ್ ಎಂದು ಜನರು ಕಮೆಂಟ್ ಮಾಡುತ್ತಿದ್ದಾರೆ.
ನಟಿ ರಶ್ಮಿಕಾ ಮಂದಣ್ಣ ಅವರನ್ನು ಒಂದಲ್ಲ ಒಂದು ವಿಚಾರದಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಹಿಗ್ಗಾಮುಗ್ಗಾ ಟ್ರೋಲ್ ಮಾಡಲಾಗುತ್ತಿದ್ದು, ವಿಕ್ಕಿ ಕೌಶಲ್ ಜತೆ ಅವರು ಕಾಣಿಸಿಕೊಂಡ ಪುರುಷರ ಒಳ ಉಡುಪಿನ ಜಾಹೀರಾತು ಕೂಡ ಸಿಕ್ಕಾಪಟ್ಟೆ ಟ್ರೋಲ್ ಆಗಿತ್ತು. ಭಾಷೆಯ ವಿಚಾರಕ್ಕೆ ರಶ್ಮಿಕಾ ಆಗಾಗ ಜನರ ಕೆಂಗಣ್ಣಿಗೆ ಗುರಿಯಾಗುತ್ತಲೇ ಇರುತ್ತಾರೆ.
ಇನ್ನು ರಶ್ಮಿಕಾ ಅದೃಷ್ಟ ಚೆನ್ನಾಗಿತ್ತು. ಅದೇ ಕಾರಣಕ್ಕೆ ಗೀತಾ ಗೋವಿಂದಂ, ಡಿಯರ್ ಕಾಮ್ರೇಡ್ ರೀತಿಯ ಸಿನಿಮಾಗಳಲ್ಲಿ ಕೆಲಸ ಮಾಡುವ ಅವಕಾಶ ಸಿಕ್ತು. ಇವರು ಹೇಗೆ ನ್ಯಾಷನಲ್ ಕ್ರಶ್ ಆಗಲು ಸಾಧ್ಯ? ಇವರಿಗಿಂತ ಚೆನ್ನಾಗಿ ಬೇರೆ ನಟಿಯರು ಇದ್ದಾರೆ ಎಂದು ನೆಟ್ಟಿಗರೊಬ್ಬರು ಕಮೆಂಟ್ ಮಾಡಿದ್ದಾರೆ.