ಹೈದರಾಬಾದ್, ಜ.02 (DaijiworldNews/HR): ನಟಿ ಕಾಜಲ್ ಅಗರ್ವಾಲ್ ತಾಯಿ ಆಗುತ್ತಿದ್ದು, ಈ ವಿಚಾರವನ್ನು ಅವರ ಪತಿ ಗೌತಮ್ ಕಿಚ್ಲು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಗೌತಮ್ ಅವರು ತಮ್ಮ ಇನ್ಟಾಗ್ರಾಮ್ ನಲ್ಲಿ ಕಾಜಲ್ ಅವರ ಮುದ್ದಾದ ಫೋಟೋವನ್ನು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದು, ಕಾಜಲ್ ದಂಪತಿ ಕುಟುಂಬಕ್ಕೆ ಹೊಸ ಅತಿಥಿ ಆಗಮಿಸುವುದನ್ನು ಅಧಿಕೃತವಾಗಿ ಘೋಷಿಸಿದ್ದಾರೆ.
ಇನ್ನು ಇತ್ತೀಚೆಗಷ್ಟೇ ಮದುವೆಯ ವಾರ್ಷಿಕೋತ್ಸವವನ್ನು ಆಚರಿಸಿದ್ದ ಕಾಜಲ್, ಗೌತಮ್ ಹೊಸ ವರ್ಷದ ಶುಭಾಷಯವನ್ನು ಕೋರಿದ್ದು, ತಾಯಿಯಾಗುತ್ತಿರುವುದನ್ನು ಬಿಂಬಿಸುವ ಫೋಟೋವೊಂದನ್ನೂ ಕಾಜಲ್ ಹಂಚಿಕೊಂಡಿದ್ದಾರೆ.