ಬೆಂಗಳೂರು, ಏ 21 (DaijiworldNews/HR): ನಟಿ ಪ್ರಿಯಾಂಕಾ ಚೋಪ್ರಾ ಮತ್ತು ಗಾಯಕ ನಿಕ್ ಜೋನಸ್ ದಂಪತಿ ಮಗಳಿಗೆ 'ಮಾಲತಿ ಮೇರಿ' ಎಂದು ನಾಮಕರಣ ಮಾಡಿದ್ದಾರೆ.
ಪ್ರಿಯಾಂಕಾ- ನಿಕ್ ದಂಪತಿ ತಾವು ಬಾಡಿಗೆ ತಾಯ್ತನದ ಮೂಲಕ ಮಗು ಪಡೆದಿರುವುದಾಗಿ ಜನವರಿಯಲ್ಲಿ ಘೋಷಿಸಿದ್ದು, ಇದೀಗ ಮಗಳಿಗೆ 'ಮಾಲತಿ ಮೇರಿ' ಎಂದು ನಾಮಕರಣ ಮಾಡಿದ್ದಾರೆ.
ಪ್ರಿಯಾಂಕಾ ಹಾಗೂ ನಿಕ್ ಜೋನಸ್ ದಂಪತಿ 2018 ರ ಡಿಸೆಂಬರ್ನಲ್ಲಿ ಜೈಪುರದಲ್ಲಿ ಮದುವೆಯಾಗಿದ್ದರು. ಸದ್ಯ ಅಮೆರಿಕದಲ್ಲಿ ನೆಲೆಸಿದ್ದಾರೆ.
ಇನ್ನು ನಾವು ಬಾಡಿಗೆ ತಾಯ್ತನದ ಮೂಲಕ ಮಗು ಪಡೆದಿದ್ದು, ಈ ವಿಶೇಷ ಸಂದರ್ಭದಲ್ಲಿ ಎಲ್ಲರೂ ನಮ್ಮ ಖಾಸಗಿತನವನ್ನು ಗೌರವಿಸಬೇಕು ಎಂದು ಕೇಳಿಕೊಳ್ಳುತ್ತೇನೆ ಎಂದು ಪ್ರಿಯಾಂಕಾ ಇನ್ಸ್ಟಾಗ್ರಾಮ್ನಲ್ಲಿ ಮಾಹಿತಿ ಹೇಳಿಕೊಂಡಿದ್ದರು.