ಬೆಂಗಳೂರು, ಏ 27 (DaijiworldNews/HR): 'ಹೊಂಬಾಳೆ ಫಿಲ್ಮ್ಸ್' ಸಂಸ್ಥೆ ಈಗ ಮತ್ತೊಂದು ಹೊಸ ಸಿನಿಮಾ ಘೋಷಣೆ ಮಾಡಿದ್ದು, ಈ ಬಾರಿ ಯುವ ರಾಜ್ಕುಮಾರ್ ಜೊತೆ ಕೈ ಜೋಡಿಸಿದೆ.
ಕೆಜಿಎಫ್ ಚಾಪ್ಟರ್ 2 ಸಿನಿಮಾದಿಂದ ಹೊಂಬಾಳೆ ಫಿಲ್ಮ್ಸ್ ಖ್ಯಾತಿ ಪಡೆದಿದ್ದು, ಇದೀಗ ರಾಘವೇಂದ್ರ ರಾಜ್ಕುಮಾರ್ ಅವರ ಎರಡನೇ ಪುತ್ರನಾದ ಯುವ ರಾಜ್ಕುಮಾರ್ ಮತ್ತು ನಿರ್ದೇಶಕ ಸಂತೋಷ್ ಆನಂದ್ರಾಮ್ ಜೊತೆ ಸಿನಿಮಾ ಮಾಡಲು ನಿರ್ಮಾಪಕ ವಿಜಯ್ ಕಿರಗಂದೂರು ಮುಂದಾಗಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಹೊಂಬಾಳೆ ಫಿಲ್ಮ್ಸ್, ಅಭಿಮಾನದಿಂದ ಅಭಿಮಾನಕ್ಕಾಗಿ ಈ ನಮ್ಮ ಪಯಣ. ಇರಲಿ ನಿಮ್ಮ ಅಪ್ಪುಗೆ. ಲೆಗೆಸಿ ಮುಂದುವರಿಯುತ್ತದೆ. ಯುವ ರಾಜ್ಕುಮಾರ್ ಅವರನ್ನು ಹೊಂಬಾಳೆ ಫಿಲ್ಮ್ಸ್ ಹೆಮ್ಮೆಯಿಂದ ಪರಿಚಯಿಸುತ್ತಿದೆ ಎಂದು ಪೋಸ್ಟ್ ಮಾಡಲಾಗಿದೆ.
ಇನ್ನು ಯುವ ರಾಜ್ಕುಮಾರ್ ನಟನೆಯ ಮೊದಲ ಸಿನಿಮಾ 'ಯುವ ರಣಧೀರ ಕಂಠೀರವ' ಚಿತ್ರ ಈ ಹಿಂದೆ ಅನೌನ್ಸ್ ಆಗಿದ್ದು, ಕಾರಣಾಂತರಗಳಿಂದ ಆ ಸಿನಿಮಾ ಕೆಲಸಗಳು ವಿಳಂಬ ಆಗಿವೆ.