ಹೈದರಾಬಾದ್, ಜೂ 21 (DaijiworldNews/HR): ಈಗಾಗಲೇ ನಟಿ ಸಮಂತಾ ಮತ್ತು ನಾಗ ಚೈತನ್ಯ ವಿಚ್ಛೇದನ ಪಡೆದುಕೊಂಡಿದ್ದು, ನಟಿ ಶೋಭಿತಾ ಧುಲಿಪಾಲ ಜೊತೆ ನಾಗ ಚೈತನ್ಯ ಡೇಟಿಂಗ್ ನಡೆಸುತ್ತಿದ್ದಾರೆ ಎಂಬ ವದಂತಿ ಹಬ್ಬಿತ್ತಿರುವುದರ ಜೊತೆ ಇದೇ ವಿಚಾರಕ್ಕೆ ಸಮಂತಾ ಅವರನ್ನು ಎಳೆದು ತಂದಿದ್ದು ಅವರಿಗೆ ಸಮಂತಾ ಖಡಕ್ ಉತ್ತರ ನೀಡಿದ್ದಾರೆ.
ಇವರಿಬ್ಬರ ವಿಚ್ಛೇದನದ ಬಳಿಕ ನಾಗಚೈತನ್ಯ ನಟಿ ಶೋಭಿತಾ ಧುಲಿಪಾಲ ಜತೆ ಪ್ರೀತಿಯಲ್ಲಿದ್ದಾರೆಂದು ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದು, ಇದೇ ವಿಷ್ಯಕ್ಕೆ ಸಮಂತಾ ಅವರನ್ನು ಕೆಲವು ಫ್ಯಾನ್ಸ್ ಎಳೆದು ತ್ಂದಿದ್ದು, ಇದಕ್ಕೆ ಸಮಂತಾ ಖಡಕ್ ಉತ್ತರ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಮಂತಾ, ಹೆಣ್ಣು ಮಕ್ಕಳ ಬಗ್ಗೆ ವದಂತಿ ಹಬ್ಬಿದರೆ ಅದು ನಿಜ ಎನ್ನುತ್ತೀರಿ. ಗಂಡು ಮಕ್ಕಳ ಬಗ್ಗೆ ವದಂತಿ ಹಬ್ಬಿದರೆ ಇದು ಹೆಣ್ಣಿನ ಕೆಲಸ ಎನ್ನುತ್ತೀರಿ. ಇದರಲ್ಲಿ ಭಾಗಿಯಾದವರೇ ಎಲ್ಲವನ್ನು ಬಿಟ್ಟು ಮುಂದೆ ಸಾಗಿದ್ದಾರೆ. ನೀವೂ ಇದನ್ನು ಬಿಟ್ಟು ಮುಂದೆ ಸಾಗಿ. ನಿಮ್ಮ ಕೆಲಸ ನೋಡಿಕೊಳ್ಳಿ, ನಿಮ್ಮ ಕುಟುಂಬದ ಕಡೆ ಗಮನ ನೀಡಿ ಎಂದು ಬರೆದುಕೊಂಡಿದ್ದಾರೆ.