ಮುಂಬೈ, ಜು 29 (DaijiworldNews/HR): ಬಾಲಿವುಡ್ನ ಜೋಡಿಗಳಲ್ಲಿ ಬಿಪಾಶಾ ಬಸು ಮತ್ತು ಕರಣ್ ಸಿಂಗ್ ಹೊಸ ಅತಿಥಿಯ ಆಗಮನದ ನಿರೀಕ್ಷೆಯಲ್ಲಿದ್ದು, ಅಭಿಮಾನಿಗಳಲ್ಲಿ ಸಂತಸ ಹೆಚ್ಚಿದೆ.
2016ರಲ್ಲಿ ಬಿಪಾಶಾ ಮತ್ತು ಕರಣ್ ದಾಂಪತ್ಯ ಜೀವನಕ್ಕೆ ಕಾಲಿದ್ದು, ಇದೀಗ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.
ಇನ್ನು ಬಿಪಾಶಾ ಮತ್ತು ಕರಣ್ ಸಿಂಗ್ ಮನೆಯಲ್ಲಿ ಸಂತಸ ಮನೆ ಮಾಡಿದ್ದು, ಹೊಸ ಅತಿಥಿ ಆಗಮನದ ಖುಷಿಯಲ್ಲಿರುವ ಈ ಜೋಡಿ ಮಗುವಿನ ನಿರೀಕ್ಷೆಯಲ್ಲಿರುವ ಕುರಿತು ಸದ್ಯದಲ್ಲಿಯೇ ಅಧಿಕೃತ ಘೋಷಣೆ ಮಾಡಲಿದ್ದಾರೆ.