ನವದೆಹಲಿ, ನ 15 (DaijiworldNews/HR): ಸಿನಿಮಾ ಕ್ಷೇತ್ರದಿಂದ ಒಂದು ವರ್ಷ ಬಿಡುವು ಪಡೆದು, ಕುಟುಂಬದ ಜತೆ ಕಾಲ ಕಳೆಯಲು ನಿರ್ಧರಿಸಿದ್ದೇನೆ ಎಂದು ಬಾಲಿವುಡ್ ನಟ ಅಮೀರ್ ಖಾನ್ ಹೇಳಿದ್ದಾರೆ.
ನಾನು 35 ವರ್ಷಕ್ಕೂ ಹೆಚ್ಚು ಕಾಲ ಸಿನಿಮಾರಂಗದಲ್ಲಿಲ್ಲೇ ಇದ್ದು, ಈಗ ಒಂದು ವರ್ಷ ಬಿಡುವು ಪಡೆದುಕೊಳ್ಳಲು ನಿರ್ಧರಿಸಿದ್ದೇನೆ ಎಂದಿದ್ದಾರೆ.
ಇನ್ನು ಸಿನಿಮಾದಲ್ಲಿ ಪೂರ್ತಿಯಾಗಿ ತೊಡಗಿಸಿಕೊಂಡಿದ್ದರಿಂದ ಕುಟುಂಬಕ್ಕೆ ಸಮಯ ನೀಡಲು ಸಾಧ್ಯವಾಗಿಲ್ಲ. ಹೀಗಾಗಿ ಚಿತ್ರರಂಗದಿಂದ ಸ್ವಲ್ಪ ದೂರ ಉಳಿದು ತಾಯಿ, ಮಕ್ಕಳ ಜೊತೆ ಇರಲು ಬಯಸುತ್ತೇನೆ ಎಂದು ಹೇಳಿದ್ದಾರೆ.