ಹೈದರಾಬಾದ್, ಏ 15 (DaijiworldNews/HR): ನಟಿ ಸಮಂತಾ ಅವರು 'ಶಾಕುಂತಲಂ' ಚಿತ್ರದ ನಟನೆಗಾಗಿ ಸದ್ಯ ಗಮನ ಸೆಳೆಯುತ್ತಿದ್ದು, ಇತ್ತ ನಿರ್ಮಾಪಕನೊಬ್ಬ ಸಮಂತಾಳದ್ದು ಅಜ್ಜಿ ಮುಖ, ಅವಳ ವೃತ್ತಿ ಜೀವನ ಮುಗಿದಿದೆ ಎಂದು ನಾಲಿಗೆ ಹರಿಬಿಟ್ಟಿದ್ದಾರೆ.
ತೆಲುಗಿನ ನಿರ್ಮಾಪಕ ಚಿಟ್ಟಿಬಾಬು ಸಮಂತಾ ವಿರುದ್ಧ ಮಾತನಾಡಿದ್ದು, ಶಾಕುಂತಲೆ ಅಪ್ರತಿಮ ಸೌಂದರ್ಯವತಿ, ಆದರೆ ಸಮಂತಾಗೆ ಆ ಪಾತ್ರ ಸೂಟ್ ಆಗಲ್ಲ. ಸಮಂತಾ ಮುಖ ಕಿತ್ತುಹೋಗಿದೆ. ಅದಕ್ಕಾಗಿ ಜನರನ್ನು ಸೆಳೆಯಲು ನಾನು ಸತ್ತುಹೋಗುತ್ತೇನೆ ಅದೂ ಇದು ಎಂದು ಹೈ ಡ್ರಾಮಾ ಮಾಡ್ತಿದ್ದಾರೆ ಎಂದಿದ್ದಾರೆ.
ಇನ್ನು ಈ ಹಿಂದೆ ಯಾವುದೋ ಸಿನಿಮಾಕ್ಕೆ ಬೆಡ್ ಮೇಲೆ ಮಲಗಿ ಡಬ್ಬಿಂಗ್ ಮಾಡುತ್ತಿದ್ದೇನೆ ಎಂದು ಹೇಳಿಕೊಂಡಿದ್ದಳು. ಇದೆಲ್ಲಾ ಅವರ ಪ್ರಚಾರ ಗಿಮಿಕ್. ಹಿಂದೆ ಹಲವು ಕಲಾವಿದರು ತೀವ್ರ ಜ್ವರದ ನಡುವೆಯೂ ಸಿನಿಮಾಗಳಲ್ಲಿ ನಟಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.
ನಿರ್ಮಾಪಕ ಚಿಟ್ಟಿಬಾಬು ಮಾತುಗಳಿಗೆ ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತವಾಗಿದ್ದು, ಸಾಕಷ್ಟು ಕಾಮೆಂಟ್ ಗಳು ಹರಿದಾಡುತ್ತಿದೆ.