ಮುಂಬೈ, ಮೇ 28 (DaijiworldNews/KH): ಗುಜರಾತ್ ಟೈಟಾನ್ಸ್ ತಂಡದ ಸ್ಟಾರ್ ಬ್ಯಾಟ್ಸ್ಮನ್ ಶುಭ್ಮನ್ ಗಿಲ್ ಮತ್ತು ಬಾಲಿವುಡ್ ನಟಿ ಸಾರಾ ಅಲಿ ಖಾನ್ ಇಬ್ಬರೂ ಡೇಟಿಂಗ್ ಮಾಡುತ್ತಿದ್ದರು ಎಂಬ ವದಂತಿಗಳು ಹಲವಾರು ದಿನಗಳಿಂದ ಹಬ್ಬಿದ್ದವು. ಸಾರಾ ಅಲಿ ಖಾನ್ ಮತ್ತು ಶುಭ್ಮನ್ ಗಿಲ್ ಇಬ್ಬರೂ ಸಾಮಾನ್ಯವಾಗಿ ಅಲ್ಲಿ ಅಲ್ಲಿಯೇ ಒಟ್ಟಿಗೆ ಕಾಣಿಸಿಕೊಂಡಿದ್ದು ಕೂಡ ಇದೆ ಅಲ್ಲದೇ ವಿಮಾನದಲ್ಲಿ ಇವರಿಬ್ಬರು ಒಟ್ಟಿಗೆ ಪ್ರಯಾಣಿಸುತ್ತಿದ್ದರು. ಆದರೆ ಈಗ ಇಬ್ಬರ ನಡುವಿನ ಲವ್ ಬ್ರೇಕ್ ಅಪ್ ಆಗಿದೆ ಎನ್ನುವುದು ಕುತೂಹಲಕಾರಿ ಸಂಗತಿ.
ಸಾರಾ ಅಲಿ ಖಾನ್ ಮತ್ತು ಶುಭ್ಮನ್ ಗಿಲ್ ಸಾಮಾಜಿಕ ಮಾಧ್ಯಮದಲ್ಲಿ ಪರಸ್ಪರ ಅನ್ ಫಾಲೋ ಮಾಡಿಕೊಂಡಿದ್ದಾರೆ. ಹಲವು ವಿಚಾರಗಳನ್ನೂ ಹಂಚಿಕೊಳ್ಳುತ್ತಿದ್ದರು. ಇದೀಗ ಇಬ್ಬರೂ ಫಾಲೋ ಮಾಡುವುದನ್ನು ನಿಲ್ಲಿಸಿದ್ದಾರೆ. ಹಾಗಾಗಿ ಅವರಿಬ್ಬರ ಸಂಬಂಧದಲ್ಲಿ ಬಿರುಕು ಮೂಡಿದೆ ಎಂಬ ಅನುಮಾನಕ್ಕೆ ಕಾರಣವಾಗಿದೆ.
ಸೈಫ್ ಅಲಿ ಖಾನ್ ಪುತ್ರಿ ಸಾರಾ ಬಿಟೌನ್ನ ಸಾಲು ಸಾಲು ಸಿನಿಮಾಗಳ ಮೂಲಕ ಮೋಡಿ ಮಾಡಿದ್ದರು. ಹೀಗಾಗಿ ಸಿನಿಮಾಗಿಂತ ಡೇಟಿಂಗ್ ವಿಷ್ಯವಾಗಿ ಸುದ್ದಿಯಲ್ಲಿದ್ದರು. ಮುಂಬೈ ಮತ್ತು ದೆಹಲಿಯಲ್ಲಿ ಶುಭ್ ಮನ್ ಗಿಲ್ ಮತ್ತು ಸಾರಾ ಪದೇ ಪದೇ ಒಟ್ಟಿಗೆ ಕಾಣಿಸಿಕೊಳ್ಳುವ ಮೂಲಕ ಇಬ್ಬರ ಲವ್ವಿ ಡವ್ವಿ ವಿಚಾರವನ್ನು ಬಹಿರಂಗಗೊಳಿಸಿದ್ದರು.
ಇಬ್ಬರೂ ಇತ್ತೀಚೆಗಷ್ಟೇ ಮುಂಬೈನ ಬಾಸ್ಟಿಯನ್ ರೆಸ್ಟೋರೆಂಟ್ಲ್ಲಿ ಒಟ್ಟಿಗೆ ಡಿನ್ನರ್ ಮಾಡಿಕೊಂಡು ನಂತರ ದೆಹಲಿಯಲ್ಲಿ ಕಾಣಿಸಿಕೊಂಡಿದ್ದರು. ಕ್ಯಾಶುಯಲ್ ಉಡುಗೆಯಲ್ಲಿ ದೆಹಲಿ ಹೋಟೆಲ್ನಿಂದ ಇಬ್ಬರು ಹೊರಗೆ ಬಂದ ಬಳಿಕ ವಿಮಾನದಲ್ಲಿ ಅಭಿಮಾನಿಗಳ ಜೊತೆ ಸೆಲ್ಫಿ ಕ್ಲಿಕಿಸಿಕೊಂಡ ಫೋಟೋ ಸಖತ್ ವೈರಲ್ ಆಗಿತ್ತು.