ಮುಂಬೈ, ಮೇ 31 (DaijiworldNews/HR): ಸೈಫ್ ಅಲಿ ಖಾನ್ ಅವರ ಪುತ್ರಿ ಸಾರಾ ಅವರು ಉಜ್ಜಯಿನಿಯಲ್ಲಿನ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಇದೆಲ್ಲ ಪ್ರಚಾರದ ಗಿಮಿಕ್ ಎಂದು ನೆಟ್ಟಿಗರು ವ್ಯಂಗ್ಯವಾಡಿದ್ದಾರೆ.
ಸಾರಾ ಅವರು ಮಹಾಕಾಳೇಶ್ವರ ದೇವಸ್ಥಾನಕ್ಕೆ ಗುಲಾಬಿ ಬಣ್ಣದ ಸಾಂಪ್ರದಾಯಿಕ ಉಡುಗೆ ಧರಿಸಿ ಕಾಣಿಸಿಕೊಂಡ ಅವರು ಅಲ್ಲಿನ ಪುರೋಹಿತರ ಜೊತೆ ಮಾತನಾಡಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ.
ಇನ್ನು ಸಾರಾ, ಹಿಂದೂ ದೇವಸ್ಥಾನಕ್ಕೆ ಭೇಟಿ ನೀಡಿರೋದ್ದಕ್ಕೆ ಕೆಲವರು ವಿರೋಧ ವ್ಯಕ್ತಪಡಿಸಿದ್ದು,ಇದೆಲ್ಲ ಪ್ರಚಾರದ ಗಿಮಿಕ್ ಎಂದು ವ್ಯಂಗ್ಯವಾಡಿದ್ದಾರೆ.