ಬೆಂಗಳೂರು, ಜೂ 04 (DaijiworldNews/MS): ಜೂನಿಯರ್ ರೆಬೆಲ್ ಸ್ಟಾರ್’ ಅಭಿಷೇಕ್ ಅಂಬರೀಷ್ ಹಸೆಮಣೆ ಏರಲು ಇನ್ನೇನು ಒಂದು ದಿನ ಬಾಕಿ ಇದೆ. ಈಗಾಗಲೇ ಮದುವೆ ಶಾಸ್ತ್ರಗಳು ಆರಂಭವಾಗಿದೆ. ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿಡಪ ಅವರ ಪುತ್ರಿ ಆಗಿರುವ ಅವಿವಾ ಬಿದ್ದಪ್ಪ ಹಾಗೂ ಅಭಿಷೇಕ್ ಅಂಬರೀಷ್ ಜೂನ್ 5ರಂದು ನೆರವೇರಲಿದೆ.
ಇದಕ್ಕಾಗಿದೆ ಹಳದಿ ಶಾಸ್ತ್ರ, ವರಪೂಜೆ, ಮೆಹಂದಿ ಶಾಸ್ತ್ರದ ಕಾರ್ಯಕ್ರಮಗಳನ್ನು ಅಂಬಿ ಮನೆಯಲ್ಲೇ ನೆರವೇರಿಸಲಾಗಿದೆ. ಖಾಸಗಿ ಹೋಟೆಲ್ನಲ್ಲಿ ಅದ್ದೂರಿಯಾಗಿ ಸಂಗೀತ್ ಕಾರ್ಯಕ್ರಮ ಕೂಡ ನಡೆಯಲಿದೆ.
ಜೂನ್ 5ರಂದು ಮಾಣಿಕ್ಯ-ಚಾಮರ ವಜ್ರದಲ್ಲಿ ಬೆಳಿಗ್ಗೆ ಕರ್ಕಾಟಕ ಲಗ್ನದಲ್ಲಿ (9:30-10:30) ಮದುವೆ ಸಮಾರಂಭ ನಡೆಯಲಿದೆ. ಜೂನ್ 7ಕ್ಕೆ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ನ ತ್ರಿಪುರ ವಾಸಿನಿಯಲ್ಲಿ ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಜೂನ್ 16ರಂದು ಮಂಡ್ಯದಲ್ಲಿ ಬೀಗರ ಊಟ ನಡೆಯಲಿದೆ. ಅಂದಾಜು 1 ಲಕ್ಷ ಜನರು ಇದರಲ್ಲಿ ಭಾಗಿ ಆಗುವ ನಿರೀಕ್ಷೆ ಇದೆ