ಬೆಂಗಳೂರು, ಜೂ13 (DaijiworldNews/HR): ಬಿಗ್ ಬಾಸ್ ಖ್ಯಾತಿಯ ಒಳ್ಳೆಯ ಹುಡುಗ ಪ್ರಥಮ್ ಸದ್ದಿಲ್ಲದೆ ಎಂಗೇಜ್ಮೆಂಟ್ ಮಾಡಿಕೊಂಡಿದ್ದು, ಇದೀಗ ಅವರ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಪ್ರಥಮ್ ಮಂಡ್ಯ ಮೂಲದ ಭಾನುಶ್ರೀ ಅವರನ್ನು ವರಿಸಲಿದ್ದು, ಮಂಡ್ಯ ಪಕ್ಕದ ಹಳ್ಳಿಯಲ್ಲಿ ಎರಡೂ ಕುಟುಂಬಸ್ಥರ ಸಮ್ಮುಖದಲ್ಲಿ ಸಿಂಪಲ್ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಈ ಕುರಿತು ಪೋಸ್ಟ್ ಹಂಚಿಕೊಂಡಿರುವ ಪ್ರಥಮ್, ಒಂದು ಸುಂದರ ಕ್ಷಣ. ಇವತ್ತು ನನ್ನ ಎಂಗೇಜ್ಮೆಂಟ್ ಆಯ್ತು. ಯಾವ ಆಡಂಬರ,ಸಂಭ್ರಮ, ತೋರ್ಪಡಿಕೆ ಇಲ್ಲದೆ ಬಹಳ ಸರಳವಾಗಿ ಕುಟುಂಬದವರು ಮೆಚ್ಚಿದವರ ಜೊತೆಯಾದೆ. ನಾನು ತುಂಬಾ ಸರಳವಾಗಿಯೇ ಬದುಕಿದವನು,ಹಾಗೇ ಇರೋಕೆ ಇಷ್ಟ. ನನ್ನ ಎಂಗೇಜ್ಮೆಂಟ್ ದೇಶದ ದೊಡ್ಡ ಸುದ್ಧಿಯಲ್ಲ. ಆದರೆ ನನ್ನ ಇಷ್ಟಪಡುವ ಸ್ಬೇಹಿತರು ಆತ್ಮೀಯರಿಗೆ ವಿಚಾರ ಹಂಚಿಕೊಳ್ಳೋಣ ಅನ್ನೋ ಕಾರಣಕ್ಕೆ ನಿಮ್ಗೆ ತಿಳಿಸಿದ್ದೇನೆ ಅಷ್ಟೇ. ಮದುವೆ ಎಷ್ಟು ಅದ್ಧೂರಿಯಾಗಿ ಆದೆ ಅನ್ನೋದಕ್ಕಿಂತ ಎಷ್ಟು ಚೆನ್ನಾಗಿ ಬದುಕು ಕಟ್ರಿಕಿಂಡ್ವಿ ಅನ್ನೋದೇ ನಿಜವಾದ ಸಾಧನೆ. ನನಗೆ ಹಾಗಿರೋಕೆ ಇಷ್ಟ. ಹೀಗೇ ಇದ್ದು ಬಿಡ್ತೀನಿ. ಹರಸುವವರು ಅಲ್ಲಿಂದಲೇ ಹರಸಿ. ಅದೇ ಆಶೀರ್ವಾದ ಎಂದು ಬರೆದುಕೊಂಡಿದ್ದಾರೆ.