ಬೆಂಗಳೂರು, ಜೂ 26 (DaijiworldNews/HR): ಖ್ಯಾತ ಹಿರಿಯ ನಟ, ಕನ್ನಡಿಗ ಅರ್ಜುನ್ ಸರ್ಜಾ ಅವರು ತಮ್ಮ ಪುತ್ರಿ ಐಶ್ವರ್ಯ ಸರ್ಜಾ ಅವರ ಮದುವೆ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.
ಅರ್ಜುನ್ ಸರ್ಜಾ ಅವರು ತಮ್ಮ ಪುತ್ರಿ ಐಶ್ವರ್ಯ ಅವರನ್ನು ಪ್ರೇಮ ಬರಹ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಪರಿಚಯ ಮಾಡಿಕೊಟ್ಟಿದ್ದು,.ಅದು ಕನ್ನಡ ಮತ್ತು ತಮಿಳಿನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಿತ್ತು.
ಇನ್ನು ತಮ್ಮ ಪುತ್ರಿಯನ್ನು ತಮಿಳಿನ ಖ್ಯಾತ ಹಾಸ್ಯ ನಟ ತಂಬಿ ರಾಮಯ್ಯ ಅವರ ಪುತ್ರ ಉಮಾಪತಿ ರಾಮಯ್ಯ ಜೊತೆ ಮದುವೆ ಮಾಡಲು ತಯಾರಿ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.