ಮುಂಬೈ , ಜು 23 (DaijiworldNews/AK):‘ಕೆಜಿಎಫ್’ ಸಿನಿಮಾದಲ್ಲಿ ಯಶ್ ಜೊತೆ ಸೊಂಟ ಬಳುಕಿಸಿದ್ದ ನಟಿ ಮೌನಿ ರಾಯ್ ಆರೋಗ್ಯದಲ್ಲಿ ಏರುಪೇರಾಗಿದೆ. ಈ ಕುರಿತರು ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಆರೋಗ್ಯದ ಬಗ್ಗೆ ನಟಿ ಹಂಚಿಕೊಂಡಿದ್ದಾರೆ. ಇದು ಈಗ ವೈರಲ್ ಆಗಿದೆ.
ಬಾಲಿವುಡ್ ಬ್ಯೂಟಿ ಮೌನಿ ರಾಯ್ ಅವರು ಅನಾರೋಗ್ಯದಿಂದ ಬಳುತ್ತಿದ್ದು, ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನಟಿ ಚಿಕಿತ್ಸೆ ಪಡೆಯುತ್ತಿದ್ದರು. 9 ದಿನಗಳ ಚಿಕಿತ್ಸೆಯ ನಂತರ ನಟಿ ಮನೆಗೆ ಹಿಂದಿರುಗಿದ್ದಾರೆ.
ಆಸ್ಪತ್ರೆಯಲ್ಲಿದ್ದ ಫೋಟೋಗಳನ್ನ ನಟಿ ಶೇರ್ ಮಾಡಿ, ಸಂಕಷ್ಟದ ಸಮಯದಲ್ಲಿ ಜೊತೆಯಲ್ಲಿದ್ದ ಪತಿ ಸೂರಜ್ಗೆ ಮೌನಿ ರಾಯ್ ಧನ್ಯವಾದಗಳನ್ನ ತಿಳಿಸಿದ್ದಾರೆ.
ಅಲ್ಲದೇ ಇದೀಗ ಆರೋಗ್ಯವಾಗಿದ್ದೇನೆ, ಆರಾಮ ಆಗಿ ಮನೆಗೆ ವಾಪಸ್ ಆಗಿದ್ದೇನೆ. ಅಭಿಮಾನಿಗಳ ಹಾರೈಕೆಗೆ ಧನ್ಯವಾದಗಳು ಎಂದು ನಟಿ ಬರೆದುಕೊಂಡಿದ್ದಾರೆ.
ಆದರೆ ಯಾವ ಕಾರಣಕ್ಕೆ ಅನಾರೋಗ್ಯ ಕಾಡಿತ್ತು ಎಂಬುದನ್ನ ನಟಿ ಶೇರ್ ಮಾಡಿಲ್ಲ.