ಮುಂಬೈ,ಆ 08 (DaijiworldNews/AK): ಬಾಲಿವುಡ್ ಬ್ಯೂಟಿ ಶೆರ್ಲಿನ್ ಚೋಪ್ರಾ ಅವರು ಸದಾ ಒಂದಲ್ಲಾ ಒಂದು ವಿಚಾರವಾಗಿ ಸುದ್ದಿಯಲ್ಲಿರುತ್ತಾರೆ. ಈಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಜೊತೆಗಿನ ಮದುವೆ ಬಗ್ಗೆ ನಟಿ ಮಾತನಾಡಿದ್ದಾರೆ. ಒಂದು ಷರತ್ತು ಕೂಡ ಮುಂದಿಟ್ಟಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಯಸ್ಸು 53 ಆದರೂ ಮದುವೆಯಾಗದೇ ಒಂಟಿಯಾಗಿಯೇ ಇದ್ದಾರೆ. ಇದೀಗ ರಾಹುಲ್ ಗಾಂಧಿ ಮದುವೆ ಬಗ್ಗೆ ಶೆರ್ಲಿನ್ ನೀಡಿರುವ ಹೇಳಿಕೆ ಸಂಚಲನ ಮೂಡಿಸಿದೆ. ಅಭಿಮಾನಿಗಳ ಪ್ರಶ್ನೆಗೆ ನಟಿ ತಮಾಷೆಯಾಗಿ ಉತ್ತರಿಸಿದ್ದಾರೆ.
ಶೆರ್ಲಿನ್ ಚೋಪ್ರಾ ಈ ಬಾರಿ ಬಾಂದ್ರಾ ಮುಂಬೈ ಬಾಂದ್ರಾದಲ್ಲಿ ಕ್ಯಾಮೆರಾ ಕಣ್ಣಿಗೆ ಸಿಕ್ಕಿದ್ದಾರೆ. ಅಭಿಮಾನಿಗಳೊಂದಿಗೆ ಸೆಲ್ಫಿ ಕ್ಲಿಕ್ಕಿಸುವುದರಲ್ಲಿ ನಿರತರಾಗಿದ್ದಾಗ, ಅಭಿಮಾನಿಯೊಬ್ಬರು ರಾಹುಲ್ ಗಾಂಧಿಯನ್ನು ಮದುವೆಯಾಗುತ್ತೀರಾ ಎಂದು ತಮಾಷೆಯಾಗಿ ಇದಕ್ಕೆ ಶೆರ್ಲಿನ್ ಪ್ರತಿಕ್ರಿಯೆ ನೀಡಿದ್ದು, ಹೌದು, ವೈ ನಾಟ್. ಆದರೆ ಮದುವೆಯ ನಂತರ ನನ್ನ ಸರ್ನೇಮ್ ಅನ್ನು ನಾನು ಬದಲಿಸಲ್ಲ ಎಂದು ಹೇಳಿದ್ದಾರೆ. ಈ ವಿಚಾರ ಈಗ ಫುಲ್ ವೈರಲ್ ಆಗಿದೆ.