ಮುಂಬೈ, ಅ 02 (DaijiworldNews/AK):ಟಾಲಿವುಡ್ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡೋದಕ್ಕೆ ವರುಣ್ ತೇಜ್ ಲಾವಣ್ಯ ತ್ರಿಪಾಠಿ ರೆಡಿಯಾಗಿದ್ದಾರೆ. ಇದೇ ನವೆಂಬರ್ ಮೊದಲ ವಾರದಲ್ಲಿ ಹೊಸ ಬಾಳಿಗೆ ಈ ಜೋಡಿ ಕಾಲಿಡಲಿದೆ ಎಂದು ಹೇಳಲಾಗುತ್ತಿದೆ.
ಮದುವೆ ದಿನ ಹತ್ತಿರ ಬರುತ್ತಿದ್ದಂತೆಯೇ ನಟಿ ಫಿಟ್ನೆಸ್ಗೆ ಹೆಚ್ಚು ಒತ್ತು ಕೊಡ್ತಿದ್ದಾರೆ. ಈ ಕುರಿತ ಫೋಟೋವನ್ನ ಸಾಮಾಜಿಕ ಜಾಲತಾಣದಲ್ಲಿ ಲಾವಣ್ಯ ಶೇರ್ ಮಾಡಿದ್ದಾರೆ.
ಮೆಗಾಸ್ಟಾರ್ ಮನೆ ಮಗ ವರುಣ್ ತೇಜ್-ಲಾವಣ್ಯ ಮದುವೆಗೆ ಭರ್ಜರಿ ತಯಾರಿ ನಡೆಯುತ್ತಿದೆ. ನವೆಂಬರ್ 1ರಂದು ಇಟಲಿಯಲ್ಲಿ ಹಸೆಮಣೆಗೆ ಈ ಜೋಡಿ ಏರಲಿದೆಯಂತೆ.ಮದುವೆ ದಿನ ಹತ್ತಿರ ಬರುತ್ತಿದ್ದಂತೆಯೇ ನಟಿ ಫಿಟ್ನೆಸ್ಗೆ ಹೆಚ್ಚು ಒತ್ತು ಕೊಡ್ತಿದ್ದಾರೆ. ಈ ಕುರಿತ ಫೋಟೋವನ್ನ ಸಾಮಾಜಿಕ ಜಾಲತಾಣದಲ್ಲಿ ಲಾವಣ್ಯ ಶೇರ್ ಮಾಡಿದ್ದಾರೆ.
ವರುಣ್-ಲಾವಣ್ಯ 2017ರಲ್ಲಿ ಇಬ್ಬರು ಮಿಸ್ಟರ್ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದರು. ಈ ಸಿನಿಮಾದ ಶೂಟಿಂಗ್ ವೇಳೆ ವರುಣ್ ತೇಜ್, ಲಾವಣ್ಯ ತ್ರಿಪಾಠಿ ಇಬ್ಬರೂ ಹತ್ತಿರವಾಗಿದ್ದರು. ಆರಂಭದಲ್ಲಿ ಸ್ನೇಹಿತರಾಗಿದ್ದವರು ಬರಬರುತ್ತಾ ಪ್ರೀತಿಯಲ್ಲಿ ಬಿದ್ದಿದ್ದರು. ಹಲವು ವರ್ಷಗಳವರೆಗೂ ಇಬ್ಬರೂ ಡೇಟಿಂಗ್ ಮಾಡುತ್ತಿರುವ ವಿಷಯ ಗೊತ್ತೇ ಇರಲಿಲ್ಲ. ಆದರೆ, ಅಂತರಿಕ್ಷಂ ಸಿನಿಮಾದ ವೇಳೆ ಇಬ್ಬರ ಬಗ್ಗೆ ಮೊದಲ ಬಾರಿಗೆ ಗಾಳಿಸುದ್ದಿ ಹಬ್ಬಿತ್ತು.
ಆಗಾಗ ವರುಣ್, ಲಾವಣ್ಯ ಇಬ್ಬರೂ ಹಲವು ಕಾರ್ಯಕ್ರಮಗಳು ಹಾಗೂ ಪಾರ್ಟಿಗಳಲ್ಲಿ ಭೇಟಿಯಾಗುತ್ತಿದ್ದರು. ವರುಣ್ ಡಿಸೆಂಬರ್ 25 ಲಾವಣ್ಯ ಹುಟ್ಟುಹಬ್ಬದಂದು ಮದುವೆಗೆ ಪ್ರಪೋಸ್ ಮಾಡಿದ್ದರು. ಎರಡೂ ಮನೆಯವರು ಒಪ್ಪಿದರೂ, ಈ ಜೋಡಿ ಮದುವೆ ಬಗ್ಗೆ ಬಾಯ್ಬಿಟ್ಟಿರಲಿಲ್ಲ.
ವರುಣ್- ಲಾವಣ್ಯ ಜೋಡಿ ಹೈದರಾಬಾದ್ನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಅದ್ದೂರಿ ಎಂಗೇಜ್ ಆಗಿದ್ದರು. ಜೂನ್ 9ರ ರಾತ್ರಿ ಎರಡು ಕುಟುಂಬದವರು ಆಪ್ತರಷ್ಟೇ ಭಾಗಿಯಾಗಿದ್ದರು.