ಮುಂಬೈ, ,ಅ 23 (DaijiworldNews/AK):ಇತ್ತೀಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಜೋಡಿ ನಟಿ ಪರಿಣಿತಿ ಚೋಪ್ರಾ- ರಾಘವ್ ಚಡ್ಡಾ ಇದೀಗ ಹೊಸ ಸುದ್ದಿಯೊಂದನ್ನ ಹಂಚಿಕೊಂಡಿದ್ದಾರೆ. ಭವಿಷ್ಯದಲ್ಲಿ ತಾವು ಮಕ್ಕಳನ್ನು ದತ್ತು ಪಡೆಯುವ ಬಗ್ಗೆ ಹೇಳಿರುವ ಹೇಳಿಕೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ನಟಿ ಪರಿಣಿತಿ ತಾವು ಮಗು ಮಾಡಿಕೊಳ್ಳುವುದಿಲ್ಲ. ಬದಲಾಗಿ, ಒಂದಲ್ಲ ಹಲವು ಮಕ್ಕಳನ್ನು ದತ್ತು ತೆಗೆದುಕೊಳ್ಳಲು ಇಷ್ಟಪಡುತ್ತೇನೆ ಎಂದು ಮಾತನಾಡಿದ್ದಾರೆ. ಇದು ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸದ್ದು ಮಾಡುತ್ತಿದೆ.
ಅಲ್ಲದೇ ನಾನು ಬಹಳಷ್ಟು ಮಕ್ಕಳನ್ನು ಹೊಂದಲು ಬಯಸುತ್ತೇನೆ ಎಂದು ಪರಿಣಿತ ಚೋಪ್ರಾ ಹೇಳಿದ್ದಾರೆ.