ಬೆಂಗಳೂರು, ಅ 26 (DaijiworldNews/HR): ಕನ್ನಡದ ಹೆಬ್ಬುಲಿ ಸಿನಿಮಾದ ನಾಯಕಿ ಅಮಲಾ ಪೌಲ್ ಅವರು ಎರಡನೇ ಮದುವೆಗೆ ಸಿದ್ಧರಾಗಿದ್ದಾರೆ.
ನಟಿ ಅಮಲಾ ಅವರ ಹುಟ್ಟು ಹಬ್ಬದ ದಿನದಂದೇ ಬಾಯ್ ಫ್ರೆಂಡ್ ಕೈಗೆ ಉಂಗುರು ತೊಡಿಸಿದ್ದು, ಇದೀಗ ಬಾಯ್ ಫ್ರೆಂಡ್ ಜೊತೆಗಿನ ವಿಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದಾರೆ.
ಇನ್ನು 2014ರಲ್ಲಿ ಅಮಲಾ ಅವರು ತಮಿಳು ನಿರ್ದೇಶಕ ವಿಜಯ್ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು. ಆದರೆ ಆ ಸಂಬಂಧ ತುಂಬಾ ದಿನ ಉಳಿಯಲಿಲ್ಲ. ಮದುವೆಯಾದ ಮೂರೇ ಮೂರು ವರ್ಷಕ್ಕೆ ಜೀವನ ಮುರಿದು ಬಿತ್ತು.
ಇದೀಗ ಬಾಯ್ ಫ್ರೆಂಡ್ ಜೊತೆಗಿನ ವಿಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದು, ಬಾಯ್ ಫ್ರೆಂಡ್ ಮಾಡಿರೋ ಪ್ರಪೋಸ್ಗೆ ಒಪ್ಪಿಕೊಂಡಿದ್ದಾರೆ.