ಮುಂಬೈ, ಡಿ 2 (DaijiworldNews/HR): ಉತ್ತರಾಖಂಡದ ಸುರಂಗದಲ್ಲಿ ಸುಮಾರು 17 ದಿನಗಳ ಸಿಲುಕಿಕೊಂಡಿದ್ದ 41 ಕಾರ್ಮಿಕರ ರಕ್ಷಣೆ ಕುರಿತಾದ ರೋಚಕ ಘಟನೆಯನ್ನು ಸಿನಿಮಾ ಮಾಡಲು ಬಾಲಿವುಡ್ ನಿರ್ಮಾಪಕರು ಮುಂದಾಗಿದ್ದಾರೆ ಎನ್ನುವ ಸುದ್ದಿ ಸದ್ದು ಮಾಡುತ್ತಿದೆ.
ಈ ಕಥೆಗೆ ಈಗಾಗಕೇ 14ಕ್ಕೂ ಹೆಚ್ಚು ನಿರ್ಮಾಪಕರು ಸಿನಿಮಾದ ಟೈಟಲ್ ಅನ್ನು ನೋಂದಾಯಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಉತ್ತರಾಖಂಡದ ಉತ್ತರಕಾಶಿ ಸುರಂಗದಲ್ಲಿ 17 ದಿನಗಳಿಂದ ಸಿಲುಕಿದ್ದ ಕಾರ್ಮಿಕರನ್ನು ರಕ್ಷಣೆ ಮಾಡಲಾಗಿತ್ತು. 17 ದಿನ 400 ಗಂಟೆಗಳ ಆಪರೇಷನ್ ಯಶಸ್ವಿಯಾದ ಬಳಿಕ ಕಾರ್ಮಿಕರು ಸುರಕ್ಷಿತವಾಗಿ ಹೊರಬಂದಿದ್ದರು.